Sunday, October 12, 2025

ಮಧ್ಯಪ್ರದೇಶದಲ್ಲಿ ಕೆಮ್ಮು ಸಿರಪ್ ಸೇವಿಸಿ ಮಕ್ಕಳ ಸಾವು: ರಾಜ್ಯದಲ್ಲಿ ಗೈಡ್ ಲೈನ್ ಬಿಡುಗಡೆಗೊಳಿಸಿದ ಆರೋಗ್ಯ ಇಲಾಖೆ


ಹೊಸದಿಗಂತ ಡಿಜಿಟಲ್ ಡೆಸ್ಕ್:


ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಕುಡಿದು ಮಕ್ಕಳು ಸಾವನ್ನಪ್ಪಿದ ಬಳಿಕ ರಾಜ್ಯ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ.


ಇಂದು ಮಹತ್ವದ ಸಭೆ ನಡೆಸಿದ ಇಲಾಖೆ ಕೆಮ್ಮಿನ ಸಿರಪ್ ಬಳಕೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆರೋಗ್ಯ ಇಲಾಖೆ ಮಾರ್ಗಸೂಚಿಯ ಪ್ರಕಾರ, ೨ ವರ್ಷದೊಳಗಿನ ಮಕ್ಕಳಿಗೆ ಕೆಮ್ಮು ಮತ್ತು ಶೀತದ ಸಿರಪ್ ನೀಡುವಂತಿಲ್ಲ. 2 ರಿಂದ 5 ವರ್ಷದ ಮಕ್ಕಳಿಗೆ ತಜ್ಞರ ಸಲಹೆ ಮೇರೆಗೆ ಔಷಧಿ ನೀಡಬೇಕು. ೫ ವರ್ಷ ಮೇಲ್ಪಟ್ಟ ಮಕ್ಕಳಿಗೆ ವೈದ್ಯರ ಸಲಹೆ ಮೇರೆಗೆ ಔಷಧಿ ನೀಡಬೇಕು. ಕಡಿಮೆ ಅವಧಿಗೆ ಕನಿಷ್ಠ ಅಗತ್ಯವಿರುವ ಡೋಸ್ ಬಳಸಬೇಕು. ಮಲ್ಟಿಮೆಡಿಸನ್ ಒಳಗೊಂಡ ಸಿರಪ್‌ಗಳನ್ನ ಬಳಸಬಾರದು ಎಂದು ಸೂಚಿಸಿದೆ.


ವೈದ್ಯರ ಸಲಹೆ ಇಲ್ಲದೆ ಕೆಮ್ಮಿನ ಸಿರಪ್‌ಗಳನ್ನ ಖರೀದಿಸಬಾರದು ಹಾಗೂ ಬಳಸಬಾರದು. ಈ ಹಿಂದೆ ಬಳಸಿದ ಔಷಧಿಗಳನ್ನ ಮರುಬಳಕೆ ಮಾಡಬಾರದು. ಕೆಮ್ಮು ಉಲ್ಬಣಗೊಂಡರೆ ವೈದ್ಯರನ್ನ ಸಂಪರ್ಕಿಸುವಂತೆ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

error: Content is protected !!