Sunday, October 12, 2025

ಸರ್ವೆ ವೇಳೆ ಮೃತಪಟ್ಟ ಸಿಬ್ಬಂದಿ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸರ್ವೆ ವೇಳೆ ಮೃತಪಟ್ಟ ಸಿಬ್ಬಂದಿ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ.

ಸಾಮಾಜಿಕ, ಶೈಕ್ಷಣಿಕ ಸರ್ವೆ ಮಾಡುವಾಗ ಮೂವರು ಸಿಬ್ಬಂದಿ ಮೃತಪಟ್ಟಿದ್ದು, ಇವರ ಕುಟುಂಬಗಳಿಗೆ ಪರಿಹಾರ ಧನ ನೀಡಲಾಗುತ್ತದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 1.20 ಲಕ್ಷ ಶಿಕ್ಷಕರು, ಬೇರೆ 40 ಸಾವಿರ ಸಿಬ್ಬಂದಿ ಗಣತಿಯಲ್ಲಿ ಭಾಗಿಯಾಗಿದ್ದಾರೆ. ಶಿಕ್ಷಕರಿಗೆ ಇತರೆ ಸರ್ವೆಯವರಿಗೆ 20 ಸಾವಿರ ರೂ. ಗೌರವ ಧನ ನೀಡಲಾಗುತ್ತದೆ. ಪ್ರತಿ ಮನೆಗೆ 100 ರೂ. ಕೊಡುತ್ತೇವೆ. ಲಮ್ ಸಮ್ 5 ಸಾವಿರ ರೂ. ಕೊಟ್ಟಿದ್ದೇವೆ ಅಲ್ಲಿಗೆ 20 ಸಾವಿರ ರೂ. ಆಗುತ್ತೆ. 19ರ ಒಳಗೆ ಪೂರ್ಣ ಪ್ರಮಾಣದಲ್ಲಿ ಸರ್ವೆ ಮುಗಿಯಲಿದೆ ಎಂದು ಸಿಎಂ ಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

error: Content is protected !!