Sunday, October 12, 2025

ಜಾತಿ ಸಮೀಕ್ಷೆಯಿಂದ ಪಿಯುಸಿ ಮಧ್ಯಂತರ ಪರೀಕ್ಷೆಯಲ್ಲಿ ತೊಡಗಿಸಿಕೊಂಡ ಉಪನ್ಯಾಸಕರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಜಾತಿ ಸಮೀಕ್ಷೆ ಅವಧಿ ವಿಸ್ತರಣೆ ಮಾಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಶಾಲೆಗಳ ದಸರಾ ರಜೆಯನ್ನೂ ವಿಸ್ತರಣೆ ಮಾಡಿದೆ . ಜೊತೆಗೆ ದ್ವಿತೀಯ ಪಿಯುಸಿ ಮಧ್ಯಂತರ ಪರೀಕ್ಷೆ ನಡೆಯುತ್ತಿದ್ದು ಪರೀಕ್ಷೆಯಲ್ಲಿ ತೊಡಗಿಸಿಕೊಂಡವರು ಸರ್ವೆಗೆ ಬರುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

12ನೇ ತಾರೀಕಿನಿಂದ ದ್ವಿತೀಯ ಪಿಯು ಮಧ್ಯಂತರ ಪರೀಕ್ಷೆ ನಡೆಯುತ್ತಿರುವುದರಿಂದ ಸಮೀಕ್ಷೆ ಕಾರ್ಯದಿಂದ ಪಿಯುಸಿ ಉಪನ್ಯಾಸಕರಿಗೆ ವಿನಾಯ್ತಿ ನೀಡಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿ 6700 ಜನ ಶಿಕ್ಷಕರು ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ 46 ಲಕ್ಷ ಮನೆಗಳಿವೆ. ದಿನಕ್ಕೆ 10-15 ಮನೆಗಳ ಸಮೀಕ್ಷೆ ನಡೆಸುವ ಗುರಿ ನೀಡಲಾಗಿದೆ. ಬೆಂಗಳೂರಿನಲ್ಲಿ ನರಕ ಚತುರ್ದಷಿ ಒಳಗೆ ಸಮೀಕ್ಷೆ ಮುಗಿಸಲು ಸೂಚಿಸಲಾಗಿದೆ. ಶಿಕ್ಷಕರು ಕೂಡ ಇಷ್ಟರೊಳಗೆ ಸಮೀಕ್ಷೆ ಮುಗಿಸುವ ಭರವಸೆ ನೀಡಿದ್ದಾರೆ.

error: Content is protected !!