Sunday, October 12, 2025

ಮುಂಗಡವಾಗಿ ಪಟಾಕಿ ಸಂಗ್ರಹಕ್ಕೆ ಅವಕಾಶ ಇಲ್ಲ, ಓವರ್‌ಲೋಡ್‌ ಮಾಡಿದ್ರೆ ಕಾನೂನು ಕ್ರಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೀಪಾವಳಿ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಈ ಹಿನ್ನೆಲೆ ಪಟಾಕಿ ದುರಂತಕ್ಕೆ ಬ್ರೇಕ್ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ.

ಕಳೆದ ಬಾರಿ ಅತ್ತಿಬೆಲೆಯಲ್ಲಿ ಹಾಗೂ ಮಾರ್ಕೆಟ್ ಭಾಗದಲ್ಲಿ ಪಟಾಕಿ ದುರಂತಗಳು ಆಗದ ಹಾಗೇ ಕಟ್ಟೆಚರ ವಹಿಸಲು ನಿರ್ದೇಶನ ನೀಡಲಾಗಿದೆ. ಯಾವುದೇ ಪಟಾಕಿ ಮಾರಾಟಗಾರರಿಗೆ ಮುಂಗಡವಾಗಿ ಪಟಾಕಿ ಸಂಗ್ರಹಕ್ಕೆ ಅವಕಾಶ ಇಲ್ಲ. ಬೇಡಿಕೆ ಹೆಚ್ಚಿದೆ ಎಂದು ಪಟಾಕಿ ಓವರ್ ಲೋಡ್ ಸಂಗ್ರಹ ಮಾಡಿಕೊಂಡಿದ್ದು ಕಂಡು ಬಂದರೆ ಕಾನೂನು ಕ್ರಮದ ಎಚ್ಚರಿಕೆಯನ್ನ ನೀಡಿದ್ದಾರೆ.

ಅತಿಯಾಗಿ ಪಟಾಕಿಗಳನ್ನ ಗೋಡೌನ್‌ಗಳಲ್ಲಿ ಸಂಗ್ರಹ ಮಾಡಿಕೊಂಡರೆ ಅನಾಹುತಗಳಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಹಾಗಾಗಿ ಅನಾಹುತಗಳಿಗೆ ಆಸ್ಪದ ಕೊಡಬಾರದು ಅನ್ನೋ ಕಾರಣಕ್ಕೆ ಮುಂಚಿತವಾಗಿ ಪಟಾಕಿ ಸಂಗ್ರಹ ಮಾಡಿಕೊಳ್ಳುವುದಕ್ಕೆ ಅವಕಾಶ ಇರುವುದಿಲ್ಲ ಎಂದು ಪಟಾಕಿ ಮಾರಾಟಗಾರರಿಗೆ ಸೂಚನೆ ನೀಡಿದ್ದಾರೆ.

ಮಾರಾಟಗಾರರು ದೀಪಾವಳಿ ಹಬ್ಬಕ್ಕೆ 5 ದಿನ ಮುಂಚಿತವಾಗಿ ತಂದು ಐದು ದಿನಗಳ ಒಳಗಾಗಿ ಸ್ಟಾಕ್ ಖಾಲಿ ಮಾಡಿಕೊಳ್ಳಬೇಕು. ಸೆ.18 ರಿಂದ 22ರ ತನಕ ಒಟ್ಟು ಐದು ದಿನ ಪಟಾಕಿ ಮಾರಾಟ ಮಾಡುವುದಕ್ಕೆ ಅವಕಾಶ ಕಲ್ಪಿಸಿಕೊಡಲಾಗುತ್ತದೆ. ಅನಧಿಕೃತವಾಗಿ ಗೋಡೌನ್‌ಗಳಲ್ಲಿ ಪಟಾಕಿ ಸಂಗ್ರಹಣೆ ಬಗ್ಗೆ ಬೀಟ್ ಪೊಲೀಸರು ಪರಿಶೀಲನೆ ನಡೆಸುತ್ತಾರೆ. ಒಂದು ವೇಳೆ ಪಟಾಕಿ ಸಂಗ್ರಹ ಮಾಡಿಕೊಂಡಿರುವುದು ಕಂಡು ಬಂದರೆ ಅಂತಹ ಮಾರಾಟಗಾರರ ವಿರುದ್ಧ ಕಾನೂನು ಕ್ರಮ ಜರಗಿಸಲಾಗುತ್ತದೆ ಸೂಚನೆ ನೀಡಿದ್ದಾರೆ.

error: Content is protected !!