Sunday, October 12, 2025

ಕುರುಬರನ್ನು ಎಸ್‌ಟಿಗೆ ಸೇರಿಸಿದರೆ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು: ಸಿದ್ದು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕುರುಬರನ್ನು ಎಸ್‌ಟಿಗೆ ಸೇರಿಸಿದರೆ ಎಸ್‌ಟಿ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು ಅಂತ ಮೊದಲ ಬಾರಿಗೆ ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸೋ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.

ಕುರುಬರನ್ನು ಎಸ್‌ಟಿಗೆ ಸೇರಿಸಿದರೆ ಎಸ್‌ಟಿ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎನ್ನುವುದಕ್ಕೆ ನನ್ನ ಬೆಂಬಲ, ಸಹಮತವೂ ಇದೆ. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು. ಯಾರೂ ಯಾರ ಅವಕಾಶಗಳನ್ನೂ ಕಿತ್ತುಕೊಳ್ಳಬಾರದು ಎನ್ನುವುದು ನನ್ನ ಬದ್ಧತೆ ಎಂದು ಸ್ಪಷ್ಟಪಡಿಸಿದರು. ಕುರುಬರನ್ನು ಎಸ್‌ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದು ಬೊಮ್ಮಾಯಿ ಸರ್ಕಾರ. ಆ ಶಿಫಾರಸ್ಸಿನ ಬಗ್ಗೆ ಕೆಲವು ಸ್ಪಷ್ಟನೆಗಳನ್ನು ಕೇಂದ್ರ ಕೇಳಿದೆ. ಅದಷ್ಟೇ ನಮ್ಮೆದುರಿಗಿದೆ ಎಂದು ಅವರು ಸ್ಪಷ್ಟಪಡಿಸಿದರು.

error: Content is protected !!