Sunday, October 12, 2025

ಕೊಲಂಬೊಗೆ ಹೊರಟಿದ್ದ ಏರ್​ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ: ಚೆನ್ನೈನಲ್ಲಿ ತುರ್ತು ಭೂಸ್ಪರ್ಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶ್ರೀಲಂಕಾದ ಕೊಲಂಬೊಗೆ ಹೊರಟಿದ್ದ ಏರ್​ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದು ಆತಂಕ ಸೃಷಿಸಿದ ಘಟನೆ ನಡೆದಿದೆ.

158 ಪ್ರಯಾಣಿಕರನ್ನು ಕೊಲಂಬೊಗೆ ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನವು ಚೆನ್ನೈ ನಿಲ್ದಾಣದಿಂದ ಹಾರಿದ ಕೆಲವೇ ಕ್ಷಣಗಳಲ್ಲಿ ಹಕ್ಕಿ ಡಿಕ್ಕಿ ಹೊಡೆದಿದೆ. ಪರಿಣಾಮ ತಕ್ಷಣವೇ ವಿಮಾನವನ್ನು ಲ್ಯಾಂಡಿಂಗ್​ ಮಾಡಿ ಪ್ರಯಾಣವನ್ನೇ ರದ್ದುಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನವು ಸುರಕ್ಷಿತವಾಗಿ ಇಳಿಯಿತು. ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಹೊರಗೆ ಕರೆತರಲಾಗಿದೆ. ವಿಮಾನ ಹಾರಾಟ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ಹಕ್ಕಿಯು ಎದುರು ಭಾಗದಿಂದ ಡಿಕ್ಕಿ ಹೊಡೆದಿದ್ದು ಪತ್ತೆಯಾಗಿದೆ ಎಂದು ಹೇಳಿದ್ದಾರೆ.

ಹಕ್ಕಿ ಡಿಕ್ಕಿ ಹೊಡೆದ ವಿಮಾನವನ್ನು ಏರ್ ಇಂಡಿಯಾ ಎಂಜಿನಿಯರ್‌ಗಳು ತಪಾಸಣೆ ನಡೆಸಿದರು. ಘಟನೆಯ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಆ ವಿಮಾನ ಪ್ರಯಾಣ ರದ್ದು ಮಾಡಲಾಗಿದೆ. 158 ಜನರ ಪೈಕಿ 137 ಮಂದಿಗೆ ಮತ್ತೊಂದು ವಿಮಾನದ ಮೂಲಕ ಕೊಲಂಬೊಗೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

error: Content is protected !!