Sunday, October 12, 2025

RAIN ALERT | ಈ ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆ, ಹೊರಗೆ ಹೋಗುವ ಮುನ್ನ ಯೋಚಿಸಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕದ ವಿವಿಧೆಡೆ ನಾಳೆ ಗಾಳಿ ಸಹಿತ ಉತ್ತಮ ಮಳೆ ಆಗುವ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ರೆಡ್​ ಅಲರ್ಟ್​ ಹಿನ್ನಲೆ ಗಡಿ ಜಿಲ್ಲೆಗಳಲ್ಲೂ ಉತ್ತಮ ಮಳೆ ನಿರೀಕ್ಷೆ ಇದೆ.

ಉಳಿದ ಜಿಲ್ಲೆಗಳಲ್ಲಿ ಭಾಶಶಃ ಮೋಡ ಕವಿದ ವಾತಾವರಣ ಅಥವಾ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯ ನಿರೀಕ್ಷೆ ಇದೆ. ಗಾಳಿ ವೇಗ ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇರುವ ಕಾರಣ ಕೆಲವು ಪ್ರದೇಶಗಳಲ್ಲಿ ಗಾಳಿ ಸಹಿತ ಮಳೆಯನ್ನೂ ನಿರೀಕ್ಷಿಸಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರಿನಲ್ಲಿ ಸಾಧಾರಣ ಮಳೆ ಆಗಲಿದ್ದು, ಹೆಚ್ಚು ಗಾಳಿ ಇರಲಿದೆ.

ಬೀದರ್​, ಕಲಬುರಗಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಆಗಲಿದೆ. ಶಿವಮೊಗ್ಗದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ 30 ಡಿಗ್ರಿ ಸೆಲ್ಸಿಯಸ್​ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ. ಶೇ. 25ರಷ್ಟು ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆ ಇದೆ. ರಾಮನಗರ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಮಳೆ ಆಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

error: Content is protected !!