ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮನಗರ ಜಿಲ್ಲೆ ಬಿಡದಿ ಬಳಿಯಿರುವ ವೆಲ್ಸ್ ಸ್ಟುಡಿಯೋಸ್ ಅಂಡ್ ಎಂಟರ್ ಟೈನ್ಮೆಂಟ್ ಪ್ರೈ. ಲಿ. (ಜಾಲಿ ವುಡ್ ಸ್ಟುಡಿಯೋ)ಗೆ ಜಲ ಕಾಯಿದೆ, ವಾಯು ಕಾಯಿದೆಯಡಿ ಅನುಮತಿ ಪಡೆಯದೆ ಕಾರ್ಯಾಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ರಾಮನಗರ ಪ್ರಾದೇಶಿಕ ಕಚೇರಿಯಿಂದ 2024ರಲ್ಲೇ 2 ಬಾರಿ ನೋಟಿಸ್ ನೀಡಿದ್ದರೂ ಅನುಪಾಲನೆ ಮಾಡಿದ ಕಾರಣ ಈ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದರು. ಇಲ್ಲಿ ಎಸ್.ಟಿ.ಪಿ. ಕಾರ್ಯನಿರ್ವಹಣೆ ಸೇರಿದಂತೆ ಸಮರ್ಪಕವಾಗಿ ತಾಜ್ಯ ವಿಲೇವಾರಿ ಆಗುತ್ತಿಲ್ಲ, ಜನರೇಟರ್ ಸೆಟ್ ಗಳಿದ್ದು ಅದಕ್ಕೂ ಅನುಮತಿ ಪಡೆದಿಲ್ಲ ಎಂದು ತಿಳಿಸಿದ್ದಾರೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಹೀಗಾಗಿ ಮಂಡಳಿ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.
ಅಷ್ಟಕ್ಕೂ ಬಿಗ್‌ಬಾಸ್ ಬಂದ್ ಆಗಿದ್ಯಾಕೆ? ಯಾವೆಲ್ಲ ರೂಲ್ಸ್ ಬ್ರೇಕ್ ಆಗಿದೆ?
