September 10, 2026
Thursday, September 10, 2026
spot_img

ಕಲಾವಿದರ ಮೇಲೆ ಸೇಡು ತೀರಿಸಿದ ನಟ್ಟು ಬೋಲ್ಟ್‌ ಮಿನಿಸ್ಟರ್‌! ಜೆಡಿಎಸ್‌ ಗರಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಿಡದಿ ಬಳಿ ನಡೆಯುತ್ತಿದ್ದ ಬಿಗ್‌ಬಾಸ್‌ ಶೋ ನಡೆಯುತ್ತಿದ್ದ ಜಾಲಿವುಡ್‌ ಸ್ಟುಡಿಯೋಗೆ ಬೀಗ ಹಾಕಿದ್ದಕೆ  ಜೆಡಿಎಸ್‌ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ವಿರುದ್ಧ ಸಿಟ್ಟು ಹೊರಹಾಕಿದೆ.

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಡೆಯುತ್ತಿದ್ದ ಬಿಗ್ ಬಾಸ್ ರಿಯಾಲಿಟಿ ಷೋ ಬಂದ್ ಮಾಡಿಸಿ, ಕಲಾವಿದರ ಮೇಲೆ ಸೇಡು ತೀರಿಸಿಕೊಂಡ ನಟ್ಟು ಬೋಲ್ಟ್ ಮಿನಿಸ್ಟರ್ ಡಿಕೆ ಶಿವಕುಮಾರ್‌ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದೆ.

ಮಾಲಿನ್ಯ ನಿಯಮ ಉಲ್ಲಂಘಿಸಿದ್ದಕ್ಕೆ ಬಿಗ್‌ ಬಾಸ್‌ ಶೋ ನಡೆಯುತ್ತಿದ್ದ ಜಾಲಿವುಡ್‌ ಸ್ಟುಡಿಯೋವನ್ನು ಬೆಂಗಳೂರು ದಕ್ಷಿಣ ಜಿಲ್ಲಾಡಳಿತ ಬಂದ್‌ ಮಾಡಿದೆ. ಪರಿಣಾಮ ಎಲ್ಲಾ ಸ್ಪರ್ಧಿಗಳು ಎರಡೇ ವಾರಕ್ಕೆ ಶೋದಿಂದ ಎಲಿಮಿನೇಟ್‌ ಆಗಿದ್ದಾರೆ.

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಸಿನಿಮಾ ಕಲಾವಿದರು ಭಾಗವಹಿಸಿರಲಿಲ್ಲ. ಈ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್‌, ಇದು ನನ್ನ ವಾರ್ನಿಂಗ್ ಅಂತಾದ್ರೂ ಅಂದ್ಕೊಳ್ಳಿ, ಕೋರಿಕೆ ಅಂತಾದ್ರೂ ಅಂದ್ಕೊಳ್ಳಿ, ಚಿತ್ರರಂಗದವರ ನಟ್ಟು ಬೋಲ್ಟ್ ಹೇಗೆ ಟೈಟ್ ಮಾಡಬೇಕು ಅಂತ ಗೊತ್ತು ಎಂದು ಹೇಳಿಕೆ ನೀಡಿದ್ದು ದೊಡ್ಡ ಚರ್ಚೆಗೆ ಗ್ರಾಸವಾಗಿತ್ತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !