Sunday, January 11, 2026

ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯ: ಚಿಕಿತ್ಸೆ ಪಡೆಯುತ್ತಿದ್ದ 6 ಮಕ್ಕಳ ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಧ್ಯಪ್ರದೇಶದಲ್ಲಿ ಮಾರಕ ಕೆಮ್ಮಿನ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಮತ್ತೆ 6 ಮಕ್ಕಳು ಸಾವನ್ನಪ್ಪಿದ್ದು, ರಾಜ್ಯದಲ್ಲಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.

ಈ ಮೊದಲು ಮಧ್ಯಪ್ರದೇಶದ ಛಿಂದ್ವಾಡದ 14 ಮಕ್ಕಳು ವಿಷಕಾರಿ ಕೆಮ್ಮಿನ ಸಿರಪ್ ಸೇವಿಸಿದ್ದರಿಂದ ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ದೃಢಪಡಿಸಿತ್ತು. ಅದಾದ ಬಳಿಕ ಮತ್ತೆ ಮಂಗಳವಾರ (ಅ.7) ಛಿಂದ್ವಾಡದಲ್ಲಿ 4 ಹಾಗೂ ಬೇತುಲ್‌ನಲ್ಲಿ 2 ಮಕ್ಕಳು ಸಾವನ್ನಪ್ಪಿವೆ. ಇನ್ನೂ 6 ಮಕ್ಕಳು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 5 ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಸಿರಪ್ ಸೇವಿಸಿ ಅಸ್ವಸ್ಥರಾದ ಮಕ್ಕಳ ಚಿಕಿತ್ಸೆಯ ಖರ್ಚನ್ನು ತಾನೇ ಭರಿಸುವುದಾಗಿ ಮಧ್ಯಪ್ರದೇಶ ಸರ್ಕಾರ ಘೋಷಿಸಿದೆ. ಅತ್ತ ಕೋಲ್ಡ್ರಿಫ್‌ನಲ್ಲಿ ನರಸಂಬಂಧಿ ಕಾಯಿಲೆಗೆ ಕಾರಣವಾಗಬಹುದಾದ ಅಂಶ ಕಂಡುಬಂದದ್ದರಿಂದ, ಅದರ ಉತ್ಪಾದಕ ಶ್ರೀಸನ್ ಫಾರ್ಮಾಸುಟಿಕಲ್ಸ್‌ ಕಂಪನಿಗೆ ತಮಿಳುನಾಡು ಸಕಾರ ಶೋಕಾಸ್‌ ನೋಟಿಸ್‌ ನೀಡಿದೆ.

ಕೋಲ್ಡ್ರಿಫ್‌ ಕೆಮ್ಮಿನ ಸಿರಪ್‌ನಿಂದ ಸಾವುಗಳು ಸಂಭವಿಸುತ್ತಿರುವ ಪರಿಣಾಮ ಅದರ ಮಾರಾಟ, ವಿತರಣೆ ಮತ್ತು ಬಳಕೆಯನ್ನು ಪಂಜಾಬ್ ಸರ್ಕಾರ ನಿಷೇಧಿಸಿದೆ. ಇದರೊಂದಿಗೆ ಪಂಜಾಬ್‌ ಕೋಲ್ಡ್ರಿಫ್‌ ನಿಷೇಧಿಧಿಸಿದ 6 ನೇ ರಾಜ್ಯವಾಗಿ ಹೊರಹೊಮ್ಮಿದೆ.

Related articles

Comments

ಇತರರಿಗೂ ಹಂಚಿ

Latest articles

Newsletter

error: Content is protected !!