Sunday, October 12, 2025

ಆರ್‌ಎಸ್‌ಎಸ್‌ ಮುಖಂಡ ಪ್ರೊ.ನರಹರಿ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಆರ್‌ಎಸ್‌ಎಸ್ ಮುಖಂಡ, ಮಾಜಿ ಪರಿಷತ್‌ ಸದಸ್ಯ ಪ್ರೊ.ಕೃ.ನರಹರಿ (93) ನಿಧನರಾಗಿದ್ದಾರೆ.

ಬುಧವಾರ ಬೆಳಗ್ಗೆ 4.30ಕ್ಕೆ ವಯೋಸಹಜ ಸಮಸ್ಯೆಯಿಂದ ಬೆಂಗಳೂರಿನಲ್ಲಿರುವ ಸ್ವಗೃಹದಲ್ಲಿ ನರಹರಿ ವಿಧಿವಶರಾದರು. ಅವರು ಈ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹರಾಗಿ, ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ತುರ್ತು ಪರಿಸ್ಥಿತಿಯ ವಿರುದ್ಧವೂ ಹೋರಾಟ ಮಾಡಿ ಜೈಲುವಾಸ ಅನುಭವಿಸಿದ್ದರು. ನರಹರಿ ಅವರ ನಿಧನಕ್ಕೆ ಸಂಘದ ಪ್ರಮುಖರು, ಬಿಜೆಪಿ ನಾಯಕರು ಕಂಬನಿ ಮಿಡಿದಿದ್ದಾರೆ. ಬಿಜೆಪಿ ನಾಯಕರು ಮೃತರ ಕುಟುಂಬದವರನ್ನು ಭೇಟಿ ಮಾಡಿ ಸಂತಾಪ ಸೂಚಿಸಿದ್ದಾರೆ. ಪಾರ್ಥಿವ ಶರೀರವನ್ನು ಶ್ರೀರಾಂಪುರದ ಮನೆಗೆ ತರಲಾಗಿದೆ. ಇಂದು ಮಧ್ಯಾಹ್ನ 2.30ರ ವರೆಗೆ ಸ್ವಗೃಹದಲ್ಲೇ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ. ಅಪರಾಹ್ನ 3.00 ಗಂಟೆಗೆ ಹರಿಶ್ಚಂದ್ರ ಘಾಟ್ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

error: Content is protected !!