Sunday, October 12, 2025

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಾಕಿದ ಹಸುವನ್ನು ಹುಲಿ ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಹೇಳಿದರು. ಸಾಕಿದ ಹಸುವನ್ನು ಹುಲಿ ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರು ಎಷ್ಟೇ ದೊಡ್ಡವರಾಗಿದ್ದರೂ ಮುಲಾಜು ನೋಡದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಮಾನವ-ವನ್ಯಜೀವಿ ಸಹಬಾಳ್ವೆಯ ಪರಿಸರ ಪೂರಕವಾದ ಆಶಯಕ್ಕಾಗಿ ವನ್ಯಜೀವಿ ಸಪ್ತಾಹವನ್ನು ಆಚರಿಸಲಾಗುತ್ತಿದೆ. ಅರಣ್ಯ ಪರಿಸರ ಆರೋಗ್ಯಕರವಾಗಿ ವಿಸ್ತರಣೆ ಆದಷ್ಟೂ ಮನುಷ್ಯ ಪರಿಸರ ಹೆಚ್ಚು ಆರೋಗ್ಯಕರವಾಗಿರುತ್ತದೆ. ಅರಣ್ಯದ ಉಳಿವು ಭೂಮಿಯ ಉಳಿವು ಎನ್ನುವುದನ್ನು ಮರೆಯಬಾರದು.

error: Content is protected !!