ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ 2025 ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಸುಸುಮು ಕಿಟಗಾವಾ, ರಿಚರ್ಡ್ ರಾಬ್ಸನ್ ಮತ್ತು ಒಮರ್ ಎಂ. ಯಾಘಿ ಅವರಿಗೆ ನೀಡಲು ನಿರ್ಧರಿಸಿದೆ.
ಮೆಟಲ್ ಆರ್ಗಾನಿಕ್ ಫ್ರೇಮ್ವರ್ಕ್ ಅಭಿವೃದ್ಧಿ ಕ್ಷೇತ್ರದ ಅವರ ಸಾಧನೆಗಾಗಿ ನೊಬೆಲ್ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ನೀಡುವ ಮತ್ತು ರಸಾಯನಶಾಸ್ತ್ರ ಕ್ಷೇತ್ರದಲ್ಲಿ ಅತ್ಯುನ್ನತ ಗೌರವವೆಂದು ಪರಿಗಣಿಸಲಾದ ಈ ಪ್ರಶಸ್ತಿಯನ್ನು ಈ ಬಾರಿ ಮೂವರು ವಿಜ್ಞಾನಿಗಳು ಪಡೆದುಕೊಂಡಿದ್ದಾರೆ.
ಅಕ್ಟೋಬರ್ 6ರಂದು, ಶರೀರಶಾಸ್ತ್ರ ಅಥವಾ ವೈದ್ಯಕೀಯ ವಿಭಾಗದ ನೊಬೆಲ್ ಪ್ರಶಸ್ತಿಯನ್ನು ಮೇರಿ ಬ್ರಂಕೋವ್, ಫ್ರೆಡ್ ರಾಮ್ಸ್‌ಡೆಲ್ ಮತ್ತು ಶಿಮೊನ್ ಸಕಾಗುಚಿ ಅವರಿಗೆ ರೋಗನಿರೋಧಕ ನಿಯಂತ್ರಣದ ಕುರಿತಾದ ಸಂಶೋಧನೆಗಳಿಗಾಗಿ ಘೋಷಿಸಲಾಯಿತು. ಮಂಗಳವಾರ ಭೌತವಿಜ್ಞಾನಿಗಳಾದ ಜಾನ್ ಕ್ಲಾರ್ಕ್, ಮೈಕೆಲ್ ಡೆವೊರೆಟ್ ಮತ್ತು ಜಾನ್ ಮಾರ್ಟಿನಿಸ್ ಅವರು ಎಲೆಕ್ಟ್ರಾನಿಕ್ ಸರ್ಕ್ಯೂಟ್‌ಗಳಲ್ಲಿ ಕ್ವಾಂಟಮ್ ವಿದ್ಯಮಾನಗಳನ್ನು ಪ್ರದರ್ಶಿಸಿದ್ದಕ್ಕಾಗಿ ನೊಬೆಲ್ ಪ್ರಶಸ್ತಿಗೆ ಭಾಜನರಾಗಿದ್ದರು.
ಕಳೆದ ವರ್ಷದ ರಸಾಯನಶಾಸ್ತ್ರ ನೊಬೆಲ್ ಪ್ರಶಸ್ತಿಯು ಕಂಪ್ಯೂಟೇಶನಲ್ ಪ್ರೋಟೀನ್ ವಿನ್ಯಾಸ ಮತ್ತು ಪ್ರೋಟೀನ್ ರಚನೆಯ ಮುನ್ಸೂಚನೆಯಲ್ಲಿನ ಪ್ರಗತಿಯ ಕ್ಷೇತ್ರದಲ್ಲಿನ ಸಾಧನೆಗೆ ನೀಡಲಾಗಿತ್ತು. ಇದು ಔಷಧ ಮತ್ತು ಜೈವಿಕ ತಂತ್ರಜ್ಞಾನದಲ್ಲಿ ನಾವೀನ್ಯತೆಗೆ ಉತ್ತೇಜನ ನೀಡಿದ ಕ್ಷೇತ್ರಗಳಾಗಿತ್ತು.