Sunday, October 12, 2025

ಬಿಗ್ ಬಾಸ್ ಬಂದ್ ಹಿಂದೆ ‘ನಟ್ಟು ಬೋಲ್ಟು ಟೈಟ್’ ಹೇಳಿಕೆ? ಡಿಕೆ ಶಿವಕುಮಾರ್ ರಿಯಾಕ್ಷನ್ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಗೆ ಬೀಗ ಬಿದ್ದಿದೆ. ಇದಕ್ಕೆ ಈ ಹಿಂದೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದ ಕನ್ನಡ ಚಿತ್ರರಂಗದ ನಟ್ಟು ಬೋಲ್ಟು ಟೈಟ್ ಮಾಡುವ ಹೇಳಿಕೆಯೇ ಕಾರಣ ಎಂದು ವಿಪಕ್ಷಗಳು ಹೇಳುತ್ತಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿಕೆಶಿ, ಕುಮಾರಸ್ವಾಮಿ ಮತ್ತು ಜೆಡಿಎಸ್​​ನವರು ಬರೀ ರಾಜಕೀಯ ಮಾಡುತ್ತಿದ್ದಾರೆ. ಕುಮಾರಸ್ವಾಮಿಯಾದರೂ ಟ್ವೀಟ್ ಮಾಡಲಿ, ಮೇಲಿನವರಾದರೂ ಟ್ವೀಟ್ ಮಾಡಲಿ. ಅದಕ್ಕೆ ನಾನು ತಲೆ ಕೆಡಿಸಿಕೊಳ್ಳಲ್ಲ. ನಾನು ವಿಚಾರಿಸಿದ್ದೇನೆ. ಮಾಲಿನ್ಯ ನಿಯಂತ್ರಣ ಮಂಡಳಿಯವರು ಇದನ್ನು ಮಾಡಿದ್ದಾರೆ. ಆದರೂ ಕೂಡ ನಾನು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಉದ್ಯೋಗಾವಕಾಶ ತುಂಬ ಮುಖ್ಯ. ಸಮಸ್ಯೆ ನಿವಾರಣೆಗೆ ಒಂದು ಅವಕಾಶ ನೀಡಲು ಸೂಚಿಸಿದ್ದೇನೆ’ ಎಂದು ಹೇಳಿದ್ದಾರೆ.

ನಮ್ಮಲ್ಲಿ ಮನರಂಜನೆ ಆಗಬೇಕು. ನಾನೇ ಅದನ್ನು ಉದ್ಘಾಟನೆ ಮಾಡಿದ್ದು. ನನ್ನ ಬಗ್ಗೆ ಮಾತನಾಡಲಿಲ್ಲ ಎಂದರೆ ಜೆಡಿಎಸ್​ ಪಕ್ಷದವರಿಗೆ ನೆಮ್ಮದಿಯೇ ಇಲ್ಲ, ನಿದ್ರೆ ಬರಲ್ಲ. ಅವರಿಗೆ ಯಾವುದಕ್ಕೂ ಶಕ್ತಿ ಬರಲ್ಲ. ನಮ್ಮ ಸರ್ಕಾರದವರು ತಮ್ಮ ಕರ್ತವ್ಯ ಮಾಡಿರುವುದು ನನಗೆ ಗೊತ್ತಿರಲಿಲ್ಲ. ಫೋನ್ ಮಾಡಿ ಡಿಸಿ ಮತ್ತು ಎಸ್​​ಪಿ ಅವರಿಗೆ ಹೇಳಿದ್ದೇನೆ. ತಪ್ಪಾಗಿದ್ದರೆ ಅದನ್ನು ಸರಿಪಡಿಸಿಕೊಳ್ಳಲು ಅವಕಾಶ ನೀಡಬೇಕು ಅಂತ ಹೇಳಿದ್ದೇನೆ ಎಂದಿದ್ದಾರೆ.

ಟಿವಿಯಲ್ಲಿ ನೋಡಿದ ಬಳಿಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಿಗೆ ಫೋನ್ ಮಾಡಿದ್ದೇನೆ. ಬಿಗ್ ಬಾಸ್ ಮುಂತಾದ ಮನರಂಜನೆ ಇರಬೇಕು. ಖಾಸಗಿಯವರು ಬಂಡವಾಳ ಹೂಡಿಕೆ ಮಾಡಿರುತ್ತಾರೆ. ತಪ್ಪು ಆಗಿರಬಹುದು, ಆದರೆ ಸರಿ ಮಾಡಿಕೊಳ್ಳಲು ಅವಕಾಶ ಕೊಡಬೇಕು ಅಂತ ಸಲಹೆ ನೀಡಿದ್ದೇನೆ’ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

error: Content is protected !!