Monday, October 13, 2025

ಪಾಕಿಸ್ತಾನದಲ್ಲಿ ಸೇನಾ ಕಾರ್ಯಾಚರಣೆ: 11 ಸೈನಿಕರು, 19 ಭಯೋತ್ಪಾದಕರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಪಾಕ್ ತಾಲಿಬಾನ್ (ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ) ಉಗ್ರ ಸಂಘಟನೆಯ ವಿರುದ್ಧ ನಡೆದ ಸೇನಾ ಕಾರ್ಯಾಚರಣೆಯಲ್ಲಿ 11 ಪಾಕಿಸ್ತಾನಿ ಸೈನಿಕರು ಮತ್ತು 19 ಭಯೋತ್ಪಾದಕರು ಮೃತಪಟ್ಟಿದ್ದಾರೆ .

ಈ ಬಗ್ಗೆ ಪಾಕಿಸ್ತಾನ ಸೇನೆ ಬುಧವಾರ (ಅಕ್ಟೋಬರ್‌ 8) ಅಧಿಕೃತ ಮಾಹಿತಿ ನೀಡಿದೆ. ಮೃತರಲ್ಲಿ ಓರ್ವ ಲೆಫ್ಟಿನೆಂಟ್ ಕರ್ನಲ್ ಮತ್ತು ಓರ್ವ ಮೇಜರ್ ಸೇರಿದ್ದಾರೆ. ಅಫ್ಘಾನಿಸ್ತಾನದ ಗಡಿಯಲ್ಲಿರುವ ಒರಾಕ್ಜೈ ಜಿಲ್ಲೆಯಲ್ಲಿ ನಡೆದ ದಾಳಿಯ ವೇಳೆ ಈ ಸಾವು ಸಂಭವಿಸಿದೆ ಎಂದು ವರದಿ ತಿಳಿಸಿದೆ.

ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ (TTP)ದಂತಹ ಸ್ಥಳೀಯ ಉಗ್ರಗಾಮಿ ಗುಂಪು ಕಾರ್ಯಾಚರಿಸುತ್ತಿರುವ ಬಗ್ಗೆ ಮಂಗಳವಾರ ತಡರಾತ್ರಿ ಪಾಕ್ ಸೈನಿಕರಿಗೆ ಗುಪ್ತಚರ ಇಲಾಖೆಯಿಂದ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆ ನಡೆದ ಕಾರ್ಯಾಚರಣೆ ಸಮಯ ಪ್ರದೇಶದಲ್ಲಿನ ಭಯೋತ್ಪಾದಕರನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಕಾರ್ಯಾಚರಣೆ ಕೈಗೆತ್ತಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

error: Content is protected !!