ಹೊಸದಿಗಂತ ವರದಿ, ಮಳವಳ್ಳಿ:
ಬೈಕ್ ಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬುಧವಾರ ತಾಲೂಕಿನ ಹೆಗ್ಗೂರು ಗೇಟ್ ಬಳಿಯ ಮಳವಳ್ಳಿ-ಮೈಸೂರು ಮುಖ್ಯರಸ್ತೆಯಲ್ಲಿ ನಡೆದಿದೆ.
ತಾಲೂಕಿನ ಚಿಕ್ಕಮಾಳಿಗೆಕೊಪ್ಪಲು ಗ್ರಾಮದ ನಿವೃತ್ತ ಯೋಧ ಸಿ.ಟಿ.ವೆಂಕಟೇಶ್(64) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಬುಧವಾರ ಮಧ್ಯಾಹ್ನ ಸಿ.ಟಿ.ವೆಂಕಟೇಶ್ ತಮ್ಮ ಬೈಕ್ ನಲ್ಲಿ ಹೆಗ್ಗೂರು ಗೇಟ್ ಬಳಿಯ ಗದ್ದೆಗೆ ತೆರಳುತ್ತಿದ್ದ ವೇಳೆ ಮಳವಳ್ಳಿ-ಮೈಸೂರು ರಸ್ತೆಯಲ್ಲಿ ಕಾರು ಡಿಕ್ಕಿಯಾಗಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಕಿರುಗಾವಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಪ್ರಕರಣ ದಾಖಲಾಗಿದೆ.
ಮಳವಳ್ಳಿ-ಮೈಸೂರು ರಸ್ತೆಯಲ್ಲಿ ಬೈಕ್ ಗೆ ಕಾರು ಡಿಕ್ಕಿ: ಸವಾರ ಸಾವು
