Sunday, October 12, 2025

ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ ಸರಕಾರ: ಕೆಎಸ್ಸಾರ್ಟಿಸಿಗೆ ಸೇರ್ಪಡೆಯಾಗಲಿವೆ ಹೊಸದಾಗಿ 900 ಬಸ್ ಗಳು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಹೊಸದಾಗಿ 900 ಬಸ್ ಗಳು ಸೇರ್ಪಡೆಗೊಳ್ಳಲಿವೆ!

ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಖುದ್ದಾಗಿ ಮಾಹಿತಿ ನೀಡಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿಂದು ನೂತನ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಹಬ್ಬದ ಸಂದರ್ಭಗಳಲ್ಲಿ ಹೆಚ್ಚುವರಿ ಬಸ್ ಗಳನ್ನು ಓಡಿಸಲಾಗುತ್ತದೆ. ಇಂಥಹ ಸಂದರ್ಭಗಳಲ್ಲಿ ಸಂಸ್ಥೆಯ ಲಾಭಕ್ಕಿಂತ ಜನರಿಗೆ ಅನುಕೂಲವಾಗುವುದು ಮುಖ್ಯ ಎಂದು ಹೇಳಿದ್ದಾರೆ.

ದಸರಾ ಸಂದರ್ಭದಲ್ಲಿ ಹೆಚ್ಚುವರಿಯಾಗಿ 2,300 ಬಸ್ ಗಳ ಸೇವೆ ನೀಡಲಾಗಿತ್ತು. ಇದೀಗ ಮತ್ತೆ 900 ಹೊಸ ಬಸ್ ಗಳನ್ನು ಸೇರ್ಪಡೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

error: Content is protected !!