ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತಿಹಾಸ ಪ್ರಸಿದ್ಧ ಹಾಸನದ ಹಾಸನಾಂಬ ಹಾಗೂ ಸಿದ್ದೇಶ್ವರ ದೇವಾಲಯ ಬಾಗಿಲು ನಾಳೆ ತೆರೆಯಲಿದೆ.
ಸಾರ್ವಜನಿಕರಿಗೆ ಇದೇ ಶುಕ್ರವಾರದಿಂದ ದೇವರ ದರ್ಶನಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ. ವರ್ಷಕ್ಕೆ ಒಮ್ಮೆ ಮಾತ್ರ ಬಾಗಿಲು ತೆಗೆದು ದರ್ಶನ ನೀಡುವ ಹಾಸನಾಂಬೆ ಕಣ್ತುಂಬಿಕೊಳ್ಳಲು ಭಕ್ತರು ಕಾತರರಾಗಿದ್ದಾರೆ. ಈ ಬಾರಿ ಇದೇ 22ರ ತನಕ ದರ್ಶನಕ್ಕೆ ಅವಕಾಶ ಇರುವುದರಿಂದ 22 ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುವ ಅಂದಾಜು ಮಾಡಲಾಗಿದೆ.
ಭಕ್ತರಿಗೆ ಉಚಿತ ಪ್ರಸಾದ ವ್ಯವಸ್ಥೆ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ. ೮೦ ವರ್ಷಕ್ಕಿಂತ ಮೇಲ್ಪಟ್ಟವರಿಗೆ ಹಾಗೂ ವಿಶೇಷಚೇತರನರಿಗೆ ನೇರ ದರ್ಶನ ವ್ಯವಸ್ಥೆ ಕಲ್ಪಿಸಲಾಗಿದೆ. ಇದೇ ಮೊದಲ ಬಾರಿಗೆ ವಿವಿಐಪಿ ಪಾಸ್ ರದ್ದು ಮಾಡಲಾಗಿದೆ. ಪ್ರತಿ ಗಂಟೆಗೆ 6 ಸಾವಿರ ಭಕ್ತರಂತೆ ಪ್ರತಿ ದಿನ 60 ರಿಂದ ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆಯಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಿಂದ ಹಾಸನಕ್ಕೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ನಾಳೆಯಿಂದ ಭಕ್ತರಿಗೆ ಹಾಸನಾಂಬೆ ದರುಶನ: ಈ ಬಾರಿ 22 ಲಕ್ಷಕ್ಕೂ ಅಧಿಕ ಭಕ್ತರ ನಿರೀಕ್ಷೆ, ಕೆಎಸ್ಸಾರ್ಟಿಸಿಯಿಂದ ಬಸ್ ವ್ಯವಸ್ಥೆ
