Monday, October 13, 2025

ಇನ್ಮುಂದೆ ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್‌ ಮೂಲಕ ಅರ್ಜಿ ಪ್ರಕ್ರಿಯೆ ಇಲ್ಲ: ಸಚಿವ ಶಿವರಾಜ್.ಎಸ್.ತಂಗಡಗಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕುವ ಪ್ರಕ್ರಿಯೆಯನ್ನೇ ರಾಜ್ಯ ಸರಕಾರ ಕೈಬಿಟ್ಟಿದೆ.

ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಹೊಸ ನಿಯಮ ಜಾರಿಗೊಳಿಸಲಾಗುತ್ತಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸುವ ಪ್ರಕ್ರಿಯೆಯನ್ನೇ ಕೈಬಿಟ್ಟಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್.ಎಸ್.ತಂಗಡಗಿ ಮಾಹಿತಿ ನೀಡಿದ್ದಾರೆ.

ರಾಜ್ಯೋತ್ಸವ ಪ್ರಶಸ್ತಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಲಹಾ ಸಮಿತಿ ಹಾಗೂ ಉನ್ನತ ಆಯ್ಕೆ ಸಮಿತಿ ರಚಿಸಿ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲು ಸರ್ಕಾರ ನಿರ್ಧರಿಸಿದೆ. ಸಮಿತಿಯಿಂದ ಆಯ್ಕೆಯಾದ ಸಾಧಕರಿಗೆ ಮಾತ್ರ ಪ್ರಶಸ್ತಿ ನೀಡಲು ಸರ್ಕಾರ ನಿರ್ಧರಿಸಿದೆ.

ಇನ್ನೂ ಈ ಬಾರಿ 70 ಜನ ಅರ್ಹ ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಸರ್ಕಾರದ ನಿರ್ಧಾರ ಮಾಡಿದೆ. ಈಗಾಗಲೇ ಇಲಾಖೆಗೆ ಸಲ್ಲಿಕೆಯಾಗಿರುವ ಸ್ವಯಂ ಅರ್ಜಿಗಳನ್ನು ಸಹ ಪ್ರಶಸ್ತಿ ಸಲಹಾ ಸಮಿತಿ ಮುಂದೆ ಮಂಡಿಸಲು ನಿರ್ಧರಿಸಲಾಗಿದೆ.

ಕಳೆದ ವರ್ಷ 69 ಪ್ರಶಸ್ತಿಗಳಿಗೆ 2,000 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿತ್ತು. ಇದರಲ್ಲಿ ಆನ್‌ಲೈನ್‌ ಸೇವಾಸಿಂಧು ಪೋರ್ಟಲ್‌ ಮೂಲಕವೇ ಬರೋಬ್ಬರಿ 1,135ಕ್ಕೂ ಹೆಚ್ಚು ಹಾಗೂ ಭೌತಿಕವಾಗಿ 85ಕ್ಕೂ ಹೆಚ್ಚು ಅರ್ಜಿಗಳು ಸಂದಾಯವಾಗಿತ್ತು.

error: Content is protected !!