ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರ ಬೆಂಗಾವಲು ವಾಹನ (ಎಸ್ಕಾರ್ಟ್) ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಬಾಪೂಜಿನಗರದ ಮನೆಯಲ್ಲಿ ಶರಣಗೌಡ ರಾಮಗೋಳ್ (33) ನೇಣಿಗೆ ಶರಣಾಗಿದ್ದಾರೆ. ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಶರಣಗೌಡ ಅವರಿಗೆ ಈಗಾಗಲೇ ಮದುವೆಯಾಗಿದ್ದು ಎರಡು ಮಕ್ಕಳು ಸಹ ಇದ್ದು, ಪೊಲೀಸ್ ಬೆಂಗಾವಲು ವಾಹನ ಚಾಲಕರಾಗಿದ್ದರು.
ಶರಣಗೌಡ ರಾಮಗೋಳ್ ಅಶೋಕ್ ಬೆಂಗಾವಲು ವಾಹನ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ, ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಪೊಲೀಸ್ ತನಿಖೆಯಲ್ಲಿ ಶರಣಗೌಡ ಆತ್ಮಹತ್ಯೆಗೆ ಕಾರಣ ತಿಳಿದುಬರಬೇಕಿದೆ.