Saturday, October 11, 2025

6 ಕಾರುಗಳಿಗೆ ಡಿಕ್ಕಿ ಹೊಡೆದ ಲ್ಯಾಂಡ್ ರೋವರ್ ಡಿಫೆಂಡರ್: ಆಮೇಲೆ ಆಗಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬುಧವಾರ ರಾತ್ರಿ ನೋಯ್ಡಾ ಮಾಲ್ ಬಳಿ ವೇಗವಾಗಿ ಬಂದ ಲ್ಯಾಂಡ್ ರೋವರ್ ಡಿಫೆಂಡರ್ ಕಾರು ಚಾಲಕನ ನಿಯಂತ್ರಣ ತಪ್ಪಿ ಭೀಕರ ಅಪಘಾತಕ್ಕೆ ಕಾರಣವಾಗಿದೆ. ಈ ಅಪಘಾತದಲ್ಲಿ ಕನಿಷ್ಠ ಆರು ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆಕ್ಟರ್ 129ರ ಗುಲ್ಶನ್ ಒನ್29 ಮಾಲ್ನ ಹೊರಗೆ ಈ ಘಟನೆ ಸಂಭವಿಸಿದೆ. ಅತಿ ವೇಗದಲ್ಲಿದ್ದ ಲ್ಯಾಂಡ್ ರೋವರ್ ಡಿಫೆಂಡರ್ ನಾಲ್ಕು ಚಕ್ರದ ವಾಹನಗಳು ಮತ್ತು ಒಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್, ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ.

ಅಪಘಾತಕ್ಕೆ ಕಾರಣನಾದ ಲ್ಯಾಂಡ್ ರೋವರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನು ಸೆಕ್ಟರ್ 100ರ ನಿವಾಸಿ ಸುನೀಲ್ ಎಂದು ಗುರುತಿಸಲಾಗಿದೆ. ಆ ಕಾರು 1111 ಎಂಬ ವಿವಿಐಪಿ ನಂಬರ್ ಪ್ಲೇಟ್ ಹೊಂದಿತ್ತು ಎನ್ನಲಾಗಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಎಕ್ಸ್‌ಪ್ರೆಸ್‌ವೇ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ ಮತ್ತು ಅಪಘಾತಕ್ಕೀಡಾದ ಲ್ಯಾಂಡ್ ರೋವರ್ ಕಾರನ್ನು ಸಹ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಕಮಿಷನರೇಟ್ ತಿಳಿಸಿದೆ.

error: Content is protected !!