ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದಿರುವಂತೆ ತೋರಿಸುವ AI ಆಧಾರಿತ ವಿಡಿಯೋವನ್ನು ಸೃಷ್ಟಿಸಿದ ಆರೋಪದ ಮೇಲೆ ನವಿ ಮುಂಬೈ ಪೊಲೀಸರು ಸಾಮಾಜಿಕ ಮಾಧ್ಯಮ ಬಳಕೆದಾರನೊಬ್ಬನ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಸಿಜೆಐ ವಿರುದ್ಧ ಆಕ್ಷೇಪಾರ್ಹ ಮತ್ತು ಜಾತಿ ಆಧಾರಿತ ಕಾಮೆಂಟ್‌ಗಳನ್ನು ಮಾಡಿದವರ ವಿರುದ್ಧ ಪಂಜಾಬ್ ಪೊಲೀಸರು ಹಲವಾರು ಎಫ್‌ಐಆರ್‌ಗಳನ್ನು ದಾಖಲಿಸಿದ ನಂತರ ಈ ಬೆಳವಣಿಗೆ ನಡೆದಿದೆ.
ಸೋಮವಾರ ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಬೆಳಗಿನ ಕಲಾಪದ ವೇಳೆ ಸಿಜೆಐ ಬಿ.ಆರ್.ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆಯಲು ಯತ್ನಿಸಿದ್ದ. ಕೂಡಲೇ ಭದ್ರತಾ ಸಿಬ್ಬಂದಿಯು ಆತನನ್ನು ತಡೆದು ಕೋರ್ಟ್ ಹಾಲ್‌ನಿಂದ ಹೊರಹಾಕಿದ್ದರು.
ಸದ್ಯ ಸುಪ್ರೀಂಕೋರ್ಟ್ ಸಿಜೆಐ ಬಿ.ಆರ್.ಗವಾಯಿ ಅವರ ಮೇಲಿನ ಶೂ ಎಸೆತ ಪ್ರಕರಣ ದೇಶಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ನ್ಯಾಯವಾದಿ ರಾಕೇಶ್ ಕಿಶೋರ್ ವರ್ತನೆಗೆ ಎಲ್ಲೆಡೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.