Saturday, October 11, 2025

ಟೀಂ ಇಂಡಿಯಾದ ಆಟಗಾರ ರಿಂಕು ಸಿಂಗ್‌ಗೆ ದಾವೂದ್ ಗ್ಯಾಂಗ್ ನಿಂದ ಬೆದರಿಕೆ ಕರೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಟೀಂ ಇಂಡಿಯಾದ ಆಟಗಾರ ರಿಂಕು ಸಿಂಗ್‌ಗೆ ಬೆದರಿಕೆ ಕರೆಗಳು ಬಂದಿವೆ ಎಂದು ವರದಿಯಾಗಿದೆ.

ಮಾಹಿತಿಯ ಪ್ರಕಾರ, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗ್ಯಾಂಗ್ ಸದಸ್ಯರಿಂದ ರಿಂಕು ಸಿಂಗ್‌ಗೆ ಬೆದರಿಕೆ ಹಾಕಲಾಗಿದೆ. ಈ ವರ್ಷದ ಫೆಬ್ರವರಿ ಮತ್ತು ಏಪ್ರಿಲ್ ನಡುವೆ ದಾವೂದು ಸಹಚರರು, ರಿಂಕು ಸಿಂಗ್​ಗೆ ಮೂರು ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾರೆ. ರಿಂಕು ಸಿಂಗ್ ಅವರಿಂದ 5 ಕೋಟಿ ರೂ. ಸುಲಿಗೆಗೆ ಬೇಡಿಕೆ ಇಟ್ಟಿವೆ ಎಂದು ವರದಿಯಾಗಿದೆ.

ಆದಾಗ್ಯೂ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ದಾವೂದ್ ಸಹಚರರನ್ನು ಬಂಧಿಸಿದ್ದಾರೆ.

ರಿಂಕು ಸಿಂಗ್​ಗೆ ಹಣಕ್ಕಾಗಿ ಬೆದರಿಕೆ ಹಾಕಿದ್ದಕ್ಕಾಗಿ ಪೊಲೀಸರು ಬಂಧಿಸಿದ ಇಬ್ಬರು ವ್ಯಕ್ತಿಗಳಲ್ಲಿ ಒಬ್ಬರು ಬೆದರಿಕೆ ಹಾಕಿರುವುದಾಗಿ ಒಪ್ಪಿಕೊಂಡಿದ್ದಾರೆ.

5 ಕೋಟಿ ರೂ ಹಣಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಆರೋಪಿಗಳಾದ ಮೊಹಮ್ಮದ್ ದಿಲ್ಶಾದ್ ಮತ್ತು ಮೊಹಮ್ಮದ್ ನವೀದ್ ಅವರನ್ನು ವೆಸ್ಟ್ ಇಂಡೀಸ್‌ನಲ್ಲಿ ಬಂಧಿಸಲಾಗಿದೆ. ಅಲ್ಲದೆ ವೆಸ್ಟ್ ಇಂಡೀಸ್ ಸರ್ಕಾರ ಈ ಇಬ್ಬರನ್ನು ಆಗಸ್ಟ್ 1 ರಂದು ಭಾರತಕ್ಕೆ ಹಸ್ತಾಂತರಿಸಿದೆ ಎಂದು ವರದಿಯಾಗಿದೆ.

ವಾಸ್ತವವಾಗಿ ಮಾಜಿ ಶಾಸಕ ಬಾಬಾ ಸಿದ್ದಿಕಿ ಅವರ ಹತ್ಯೆಯ ನಂತರ ಅವರ ಮಗ ಜೀಶನ್ ಸಿದ್ದಿಕಿ ಅವರಿಂದ 10 ಕೋಟಿ ರೂಪಾಯಿಗಳ ಸುಲಿಗೆ ಬೇಡಿಕೆ ಇಟ್ಟಿದ್ದಕ್ಕಾಗಿ ಈ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬಂಧಿತರಾದ ನಂತರ, ಆರೋಪಿಗಳಲ್ಲಿ ಒಬ್ಬನು ರಿಂಕು ಸಿಂಗ್ ಅವರಿಗೆ ಕರೆ ಮಾಡಿ ಅವರಿಂದ ಸುಲಿಗೆ ಬೇಡಿಕೆ ಇಟ್ಟಿದ್ದಾಗಿ ಒಪ್ಪಿಕೊಂಡಿದ್ದಾನೆ. ಏಪ್ರಿಲ್ 19 ಮತ್ತು 21 ರ ನಡುವೆ ಜೀಶನ್ ಸಿದ್ದಿಕಿಗೆ ಹಣ ನೀಡುವಂತೆ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಲಾಗಿತ್ತು ಎಂದು ಮುಂಬೈ ಪೊಲೀಸ್ ಅಪರಾಧ ವಿಭಾಗ ವರದಿ ಮಾಡಿದೆ. ಹಾಗೆಯೇ ರಿಂಕು ಸಿಂಗ್​ಗೆ ಫೆಬ್ರವರಿ ಮತ್ತು ಏಪ್ರಿಲ್ ನಡುವೆ ಮೂರು ಬೆದರಿಕೆಯ ಮೇಲ್​ಗಳನ್ನು ಕಳುಹಿಸಲಾಗಿತ್ತು ಎಂದು ವರದಿಯಾಗಿದೆ.

error: Content is protected !!