Sunday, October 12, 2025

ಮುಡಾ ಕೇಸ್‌: ಎರಡು ತಿಂಗಳಲ್ಲಿ ತನಿಖೆ ಮುಗಿಸಿ ವರದಿ ಸಲ್ಲಿಸುವಂತೆ ಕೋರ್ಟ್‌ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಿಎಂ ಪತ್ನಿ ವಿರುದ್ಧದ ಮುಡಾ ಪ್ರಕರಣದ ತನಿಖೆ ಪೂರ್ಣಗೊಳಿಸಲು ತನಿಖಾ ಸಂಸ್ಥೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 2 ತಿಂಗಳು ಗಡುವು ನೀಡಿದೆ.

ಕಳೆದ 6 ತಿಂಗಳಿಂದ ತನಿಖೆಯಲ್ಲಿ ಪ್ರಗತಿ ಆಗದ ಹಿನ್ನೆಲೆ ಅರ್ಜಿದಾರರು ಬಿ ರಿಪೋರ್ಟ್‌ ಸಲ್ಲಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಈ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿ, ಇಂದಿಗೆ ಆದೇಶ ಕಾಯ್ದಿರಿಸಿತ್ತು. ಆದೇಶದಲ್ಲಿ 2 ತಿಂಗಳ ಒಳಗಾಗಿ ತನಿಖೆಯನ್ನು ಸಂಪೂರ್ಣಗೊಳಿಸಿ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಬೇಕು. ಹೆಚ್ಚುವರಿಯಾಗಿ ಕಾಲಾವಕಾಶ ಕೋರುವಂತಿಲ್ಲ ಎಂದು ನ್ಯಾಯಾಲಯ ಸೂಚಿಸಿದೆ.

ಲೋಕಾಯುಕ್ತ ಪೊಲೀಸರು ತನಿಖೆಯ ನೆಪದಲ್ಲಿ ಕಾಲಹರಣ ಮಾಡುತ್ತಾ ಇದ್ದಾರೆ. ಹೀಗಾಗಿ ಬಿ ರಿಪೋರ್ಟ್‌ಗೆ ತೀರ್ಮಾನ ಮಾಡುವಂತೆ ಅರ್ಜಿ ಸಲ್ಲಿಸಲಾಗಿತ್ತು. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಲಯ ನವೆಂಬರ್ 15ಕ್ಕೆ ವಿಚಾರಣೆ ಮುಂದೂಡಿದೆ. ತನಿಖಾಧಿಕಾರಿ ಬದಲಾವಣೆ ಮಾಡುವಂತೆ ಕೋರಿದ್ದ ಮಧ್ಯಂತರ ಅರ್ಜಿಯನ್ನು ನ್ಯಾಯಾಲಯ ಇದೇ ವೇಳೆ ವಜಾ ಮಾಡಿದೆ.

error: Content is protected !!