Thursday, December 25, 2025

ಶ್ರೀಲಂಕಾದಿಂದ ಭಾರತೀಯ ಮೀನುಗಾರರ ಬಂಧನ: ಎಸ್. ಜೈಶಂಕರ್ ಗೆ ಸ್ಟಾಲಿನ್ ಪತ್ರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

47 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಗುರುವಾರ ಬಂಧಿಸಿದ್ದಾರೆ.

ಈ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕೇಂದ್ರ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ.

ಮನ್ನಾರ್ ಮತ್ತು ಡೆಲ್ಫ್ಟ್ ಸಮುದ್ರ ಪ್ರದೇಶಗಳಲ್ಲಿ ನಡೆಸಿದ ಸಂಘಟಿತ ಗಸ್ತು ಕಾರ್ಯಾಚರಣೆಯ ಸಮಯದಲ್ಲಿ ಐದು ಟ್ರಾಲರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ದ್ವೀಪ ರಾಷ್ಟ್ರದ ನೀರಿನಲ್ಲಿ ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಉತ್ತರ ಶ್ರೀಲಂಕಾದ ತಲೈಮನ್ನಾರ್‌ನಲ್ಲಿ ಬಂಧಿಸಲಾಗಿದೆ ಎಂದು ಶ್ರೀಲಂಕಾ ನೌಕಾಪಡೆಯ ವಕ್ತಾರರು ತಿಳಿಸಿದ್ದಾರೆ.

ಉತ್ತರ ಶ್ರೀಲಂಕಾದ ಜಾಫ್ನಾ ಬಳಿ 12 ಭಾರತೀಯ ಮೀನುಗಾರರನ್ನು ಬಂಧಿಸಿ ಅವರ ದೋಣಿಯನ್ನು ವಶಪಡಿಸಿಕೊಂಡ ಒಂದು ತಿಂಗಳ ನಂತರ ಈ ಘಟನೆ ನಡೆದಿದೆ.

ಮಂದಾರ್ ತಗ್ಗು ಪ್ರದೇಶದ ಬಳಿ ಮೀನುಗಾರರನ್ನು ಬಂಧಿಸಿ ವಿಚಾರಣೆಗಾಗಿ ಮನ್ನಾರ್ ನೌಕಾ ನೆಲೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿತ್ತು.

ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಈ ಹಿಂದೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರಿಗೆ ಪತ್ರ ಬರೆದು, ಬಂಧಿತ ಮೀನುಗಾರರ ಬಿಡುಗಡೆಗೆ ರಾಜತಾಂತ್ರಿಕ ಪ್ರಯತ್ನ ಮಾಡುವಂತೆ ಒತ್ತಾಯಿಸಿದ್ದರು. ಪದೇ ಪದೆ ಬಂಧನಗಳು ಮತ್ತು ದೋಣಿ ವಶಪಡಿಸಿಕೊಳ್ಳುವಿಕೆಯಿಂದ ಉಂಟಾಗುವ ತೀವ್ರ ಆರ್ಥಿಕ ದುಷ್ಪರಿಣಾಮವನ್ನು ಸಿಎಂ ಸ್ಟಾಲಿನ್ ತಮ್ಮ ಪತ್ರದಲ್ಲಿ ಹೇಳಿದ್ದರು.

error: Content is protected !!