ಹೊಸದಿಗಂತ ಡಿಜಿಟಲ್ ಡೆಸ್ಕ್
ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ದೇವಿ ದರ್ಶನಕ್ಕೆ ತೆರಳುವ ಭಕ್ತರು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ದೀಪಾವಳಿ ಅಮಾವಾಸ್ಯೆವರೆಗೆ ಶುಕ್ರವಾರ, ಭಾನುವಾರ ಹಾಗೂ ಮಂಗಳವಾರ ಹುಬ್ಬಳ್ಳಿ ಹಾಗೂ ನವಲಗುಂದದಿಂದ ಯಲ್ಲಮ್ಮನ ಗುಡ್ಡಕ್ಕೆ ನೇರವಾಗಿ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ, ಈಗಾಗಲೇ 4 ಸಾವಿರದ 300ಕ್ಕೂ ಹೆಚ್ಚು ಭಕ್ತರು ಯಲ್ಲಮ್ಮನಗುಡ್ಡಕ್ಕೆ ಹೋಗಿ ರೇಣುಕಾ ದೇವಿಯ ದರ್ಶನ ಪಡೆದು ಬಂದಿದ್ದಾರೆ ಎಂದು ತಿಳಿಸಿದ್ದಾರೆ.
ಸವದತ್ತಿ ರೇಣುಕಾ ದೇವಿ ದರುಶನಕ್ಕೆ ಹುಬ್ಬಳ್ಳಿ, ನವಲಗುಂದದಿಂದ ನೇರ ವಿಶೇಷ ಬಸ್ ವ್ಯವಸ್ಥೆ: ಭಕ್ತರಿಗೆ ಕೆಎಸ್‌ಆರ್‌ಟಿಸಿ ಸಿಹಿಸುದ್ದಿ
