ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಬ್ಬು ಬೆಳೆಗಾರರ ಪ್ರಮುಖ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅವರಿಗೆ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಬೆಂಬಲ ನೀಡಲಾಗುವುದು ಎಂದು ಉತ್ತರಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಭರವಸೆ ನೀಡಿದ್ದಾರೆ.
ಹಳಿಯಾಳದಲ್ಲಿ 2025-26 ನೇ ಸಾಲಿನ ಕಬ್ಬು ಅರೆಯುವ ಹಂಗಾಮನ್ನು ಪ್ರಾರಂಭ ಮಾಡುವ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ವರ್ಷದಂತೆ ಈ ವರ್ಷ ಕೂಡ ಕಬ್ಬು ಕಟಾವು ಕುರಿತು ಆದ್ಯತಾ ಪಟ್ಟಿ ಪ್ರಕಟ ಮಾಡಬೇಕು ಹಾಗೂ ಅದನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಕಾರ್ಖಾನೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಇದನ್ನು ಉಲ್ಲಂಘನೆ ಮಾಡುವುದು ಕಂಡು ಬಂದಲ್ಲಿ ರೈತರು, ಪೊಲೀಸರಿಗೆ ಅಥವಾ ತಹಶೀಲ್ದಾರರಿಗೆ ಮಾಹಿತಿ ನೀಡಬಹುದು. ಅಂತಹವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಉತ್ತರಕನ್ನಡ ಕಬ್ಬು ಬೆಳೆಗಾರರ ಪ್ರಮುಖ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಬೆಂಬಲ: ಜಿಲ್ಲಾಧಿಕಾರಿ ಸ್ಪಷ್ಟೋಕ್ತಿ
