ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಮನೆ ಕುಸಿದು 5 ಮಂದಿ ಸಾವನ್ನಪ್ಪಿದ್ದು, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಅಯೋಧ್ಯಾ ಜಿಲ್ಲೆಯ ಪುರ ಕಲಂದರ್ ಪೊಲೀಸ್ ಠಾಣೆ ವ್ಯಾಪ್ತಿಯ ಪಾಗ್ಲಾ ಭಾರಿ ಗ್ರಾಮದಲ್ಲಿ ಗುರುವಾರ ರಾತ್ರಿ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಇದರಿಂದ ಮನೆ ಕುಸಿದು ಬಿದ್ದಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿ ಐದು ಜನರು ಸಾವನ್ನಪ್ಪಿದ್ದಾರೆ.
ಸ್ಫೋಟದ ಬಗ್ಗೆ ಮಾಹಿತಿ ಪಡೆದ ನಂತರ, ಎಸ್‌ಎಸ್‌ಪಿ ಮತ್ತು ಸಿಒ ಸೇರಿದಂತೆ ಹಲವಾರು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.