ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಶುಕ್ರವಾರ ಬೆಳಗ್ಗೆ ದೇಶದ ಪ್ರಮುಖ ಸುದ್ದಿಸಂಸ್ಥೆ ಕಚೇರಿಗೆ ಬಾಂಬ್ ಬೆದರಿಕೆ ಬಂದಿದೆ. ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (Press Trust of India) ಚೆನ್ನೈ ಕಚೇರಿಯನ್ನು ಗುರಿಯಾಗಿಸಿಕೊಂಡು ಬಂದ ಬಾಂಬ್ ಬೆದರಿಕೆ ಪತ್ರದ ಹಿನ್ನೆಲೆಯಲ್ಲಿ ಕಾನೂನು ಜಾರಿ ಇಲಾಖೆಯಿಂದ ತ್ವರಿತ ಕ್ರಮ ಕೈಗೊಳ್ಳಲಾಯಿತು.
ಇಂದು ಬೆಳಗ್ಗೆ ಬೆದರಿಕೆ ಪತ್ರ ಬಂದ ಕೂಡಲೇ ಸಿಬ್ಬಂದಿಯನ್ನು ಸ್ಥಳಾಂತರಿಸಿ ಬಾಂಬ್ ಪತ್ತೆ ದಳವನ್ನು ಸ್ಥಳಕ್ಕೆ ಕರೆತರಲಾಯಿತು.
ಬೆದರಿಕೆಯ ಮೂಲವನ್ನು ಬಹಿರಂಗಪಡಿಸಿಲ್ಲ. ಚೆನ್ನೈಯ ಕೋಡಂಬಕ್ಕಂನಲ್ಲಿರುವ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ಕಚೇರಿಯಲ್ಲಿ ತಪಾಸಣೆ ನಡೆಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಕಚೇರಿಯಲ್ಲಿದ್ದ ಎಲ್ಲಾ ಉದ್ಯೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.
ಬಾಂಬ್ ಪತ್ತೆ ಮತ್ತು ವಿಲೇವಾರಿ ದಳ ಮತ್ತು ಸ್ನಿಫರ್ ನಾಯಿಗಳ ಸಹಾಯದಿಂದ ಆವರಣದಲ್ಲಿ ಸಂಪೂರ್ಣ ಶೋಧ ನಡೆಸಲಾಗಿದೆ.