ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಮೊದಲ ಟೆಸ್ಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಭಾರತ ತಂಡ ಎರಡನೇ ಪಂದ್ಯವನ್ನು ಗೆದ್ದರೆ ಸರಣಿಯನ್ನು 2-0 ಅಂತರದಿಂದ ಗೆಲ್ಲಲು ಸಾಧ್ಯವಾಗುತ್ತದೆ. ಟಾಸ್ ಪ್ರಕ್ರಿಯೆಯಲ್ಲಿ ಟಾಸ್ ಗೆದ್ದ ಭಾರತ ನಾಯಕ ಶುಭ್ಮನ್ ಗಿಲ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ದ್ವಿತೀಯ ಟೆಸ್ಟ್‌ಗೆ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಮೊದಲ ಟೆಸ್ಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರೇ ಎರಡನೇ ಪಂದ್ಯದಲ್ಲಿ ತೊಡಗಿದ್ದಾರೆ. ಜಸ್ಪ್ರಿತ್ ಬುಮ್ರಾಗೆ ವಿಶ್ರಾಂತಿ ನೀಡಬಹುದು ಎಂಬ ಮಾತು ಕೇಳಿಬಂದರೂ, ತುರ್ತು ಬದಲಾವಣೆ ಅಗತ್ಯವಾಗಿಲ್ಲ ಎಂದು ನಿರ್ಧರಿಸಲಾಗಿದೆ.
ಭಾರತ ತಂಡ 1987ರಿಂದ ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಯಾವುದೇ ಟೆಸ್ಟ್ ಪಂದ್ಯ ಸೋತಿಲ್ಲ. ಗಮನಾರ್ಹ ಸಂಗತಿ ಏನೆಂದರೆ, 1987ರಲ್ಲಿ ವಿಂಡೀಸ್ ವಿರುದ್ಧವೇ ಭಾರತಕ್ಕೆ ಸೋಲು ಎದುರಾಗಿತ್ತು. ಆ ಬಳಿಕ ಇಲ್ಲಿ ಭಾರತ 12ರಲ್ಲಿ ಗೆದ್ದಿದ್ದರೆ, 12 ಪಂದ್ಯ ಡ್ರಾಗೊಂಡಿದೆ.
ಭಾರತದ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಶುಭ್ಮನ್ ಗಿಲ್ (ನಾಯಕ), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.