Friday, October 10, 2025

ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್, ಶುಕ್ರವಾರ ಉಡುಪಿ ಜಿಲ್ಲೆಯ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರುಶನ ಪಡೆದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ವತಿಯಿಂದ ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಲಾಯಿತು.
ದ. ಕ. ಮೊಗವೀರ ಮಹಾಜನ ಸಂಘದ ಸದಸ್ಯರಾದ ಕಿರಣ್ ಕುಮಾರ್ ಪಿತ್ರೊಡಿ, ದೇವಳದ ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ, ಲಾವಣ್ಯ ಬಲ್ಲಾಳ್, ಸುರೇಶ್ ಕಾಂಚನ್ ಕೋಟ, ಸೌರಭ್ ಬಳ್ಳಾಲ್, ಶ್ರೀ ಕ್ಷೇತ್ರ ವ್ಯವಸ್ಥಾಪಕ ಸತೀಶ್ ಅಮೀನ್ ಪಡುಕರೆ ಮುಂತಾದವರು ಉಪಸ್ಥಿತರಿದ್ದರು.

error: Content is protected !!