October 16, 2026
Friday, October 16, 2026
spot_img

ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್, ಬೆದರಿಕೆ ಹಾಕಿದ್ದ ಕೇಸ್: ಏಳು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್, ಬೆದರಿಕೆ ಹಾಕಿದ್ದ ಕೇಸ್ ಸಂಬಂಧ ಜಾಮೀನು ಕೋರಿ ಹೈಕೋರ್ಟ್ ಗೆ ಆರೋಪಿಗಳು ಅರ್ಜಿ ಸಲ್ಲಿಸಿದ್ದು, ಇಂದು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ 7 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಆರೋಪಿಗಳಾದ ಕೆ.ಪ್ರಮೋದ್, ಮಂಜುನಾಥ್, ರಾಜೇಶ್ ಸಿವೈ, ಓಬಣ್ಣ.ಟಿ, ಗಂಗಾಧರ್.ಕೆ.ಎಂ, ಚಿನ್ಮಯ್ ಶೆಟ್ಟಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಇನ್ನೂ ಈ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ವಿಕಾಸ್ ಬಿ.ಎ ಗೆ ನಿರೀಕ್ಷಣಾ ಜಾಮೀನು ನೀಡಲಾಗಿದೆ.

ಈಗಾಗಲೇ ಆರೋಪಪಟ್ಟಿ ದಾಖಲಾಗಿರುವ ಹಿನ್ನಲೆಯಲ್ಲಿ ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣನವರ್ ಅವರಿದ್ದ ಪೀಠದಿಂದ ಜಾಮೀನು ಮಂಜೂರು ಮಾಡಲಾಗಿದೆ. ಒಂದು ಲಕ್ಷ ಬಾಂಡ್, ಒಬ್ಬರ ಶ್ಯೂರಿಟಿ ಒದಗಿಸುವಂತೆ ಷರತ್ತು ವಿಧಿಸಲಾಗಿತ್ತು.

Must Read