ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಯುವಕನೋರ್ವ ತನ್ನ ಅಪ್ರಾಪ್ತೆ ಪ್ರೇಯಸಿಯ ದುಪ್ಪಟ್ಟದಿಂದಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರದ ಬಾಲಕುಂಟಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ಬಾಲಕುಂಟಹಳ್ಳಿಯ ನಿವಾಸಿ 18 ವರ್ಷದ ಚಿರುತ್ ಕುಮಾರ್ ಎಂದು ಗುರುತಿಸಲಾಗಿದೆ. ಇನ್ನು ಚಿರುತ್ ಸಾಯುವ ಮುನ್ನ Miss U Chinna ಅಂತ ಬಾಲಕಿಯ ಜೊತೆಗಿನ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ನೇಣಿಗೆ ಶರಣಾಗಿದ್ದಾನೆ.
ಪ್ರೇಮ ವೈಫಲ್ಯದ ಕಾರಣ ಚಿರುತ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕಿಸಲಾಗಿದೆ.
ಕೃಷಿ ಮಾಡಿಕೊಂಡಿದ್ದ ಚಿರುತ್ ಹುಡುಗಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ಆದರೆ ಇಬ್ಬರ ನಡುವೆ ಏನಾಯ್ತು ಎಂಬುದು ಕಾರಣ ತಿಳಿದುಬಂದಿಲ್ಲ. ಆದರೆ ಚಿರುತ್ ಇದ್ದಕ್ಕಿದ್ದಂತೆ ಜಕ್ಕಲಮಡುಗು ಜಲಾಶಯದ ಬಳಿ ಇರುವ ಜಮೀನು ಪಕ್ಕದಲ್ಲೇ ಇದ್ದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.