Saturday, October 11, 2025

ಇನ್ಮುಂದೆ ಜಿಬಿಎ ವ್ಯಾಪ್ತಿಗೆ ಬಿಎಂಟಿಸಿ, ಅಗ್ನಿ ಶಾಮಕ ದಳ, ಐದು ಪಾಲಿಕೆಗಳಿಗೂ ಬಜೆಟ್: ಸಭೆಯ ಪ್ರಮುಖ ಹೈಲೈಟ್ಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿಂದು ನಡೆಯಿತು.

ಸಭೆಯಲ್ಲಿ ಸಭೆಯಲ್ಲಿ ಬೆಂಗಳೂರಿನ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯಗಳು ಹಾಗೂ ಕುಂದುಕೊರತೆಗಳ ಬಗ್ಗೆಯೂ ಚರ್ಚೆ ನಡೀತು.

ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಬೆಂಗಳೂರು ನಗರ ಕಾಂಗ್ರೆಸ್ ಶಾಸಕರು, ಜಿಬಿಎ ಪಾಲಿಕೆಗಳ ಆಯುಕ್ತರು, ಸದಸ್ಯರು ಭಾಗಿಯಾಗಿದ್ದರು. ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನ ಕೈಗೊಳ್ಳಲಾಯಿತು.

ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (BDA)ಕ್ಕೆ ಇದ್ದ ಇದ್ದ ನಕ್ಷೆ ಮಂಜೂರಾತಿ ಹಾಗೂ TDR (ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕುಗಳು) ನೀಡುವ ಅಧಿಕಾರವನ್ನ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಗೆ ತರಲು ನಿರ್ಧರಿಸಲಾಯಿತು.

ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಿಗೆ ಬಜೆಟ್‌ ತೀರ್ಮಾನ ಮಾಡುವ ಜೊತೆಗೆ ಬಿಎಂಟಿಸಿ ಹಾಗೂ ಅಗ್ನಿಶಾಮಕ ದಳವನ್ನೂ ಸಹ ಬಿಜೆಪಿ ವ್ಯಾಪ್ತಿಗೆ ಸೇರಿಸಿ ನಿರ್ಣಯ ಕೈಗೊಳ್ಳಲಾಯಿತು.

ಸಭೆಯ ಮಹತ್ವದ ನಿರ್ಣಯಗಳೇನು?
– ಬಿಡಿಎಗೆ ಇದ್ದ ನಕ್ಷೆ ಮಂಜೂರಾತಿ ಇನ್ಮುಂದೆ ಜಿಬಿಎ ವ್ಯಾಪ್ತಿಗೆ
– ಟಿಡಿಆರ್ ನೀಡುವ ಅಧಿಕಾರ ಕೂಡ ಇನ್ಮುಂದೆ ಜಿಬಿಎ ವ್ಯಾಪ್ತಿಗೆ
– ಐದು ಪಾಲಿಕೆಗಳ ಬಜೆಟ್ ತೀರ್ಮಾನ
– ಇನ್ಮುಂದೆ ಜಿಬಿಎ ವ್ಯಾಪ್ತಿಗೆ ಬಿಎಂಟಿಸಿ, ಅಗ್ನಿ ಶಾಮಕ ದಳ
– ಕೇಂದ್ರ ಸಂಯೋಜನಾ ಸಮಿತಿ ರಚನೆಗೆ ತೀರ್ಮಾನ (ಇಲಾಖೆಗಳ ನಡುವಿನ ಸಮನ್ವಯತೆಗೆ)
– ಜಿಬಿಎ ಮುಖ್ಯ ಆಯುಕ್ತರ ನೇತೃತ್ವದಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಲು ತೀರ್ಮಾನ
– ಐದು ಪಾಲಿಕೆಗಳಿಗೆ ಐದು ಕಚೇರಿ ಅಂತಿಮ
– ಸೆಂಟ್ರಲ್ ಪಾಲಿಕೆ ಜಿಬಿಎ ಕೇಂದ್ರ ಕಚೇರಿಯಲ್ಲೇ ಕಚೇರಿ ಇರಲಿದೆ
– ಹೊಸ ಪಾಲಿಕೆ ಕಚೇರಿ ಕಟ್ಟಡಗಳು ಒಂದೇ ರೀತಿ ಇರಬೇಕೆಂದು ತೀರ್ಮಾನಿಸಲಾಗಿದೆ
– ಒಂದೇ ಮಾದರಿಯಲ್ಲಿ ಕಚೇರಿ ನಿರ್ಮಾಣ ಮಾಡಲು ತೀರ್ಮಾನ
– ಹೊಸದಾಗಿ ಐದು ಪಾಲಿಕೆಗಳಿಗೆ ಕಚೇರಿ ನಿರ್ಮಾಣ

ಬಿಜೆಎ ಸಭೆಗೆ ಬಿಜೆಪಿ ಶಾಸಕರ ಗೈರು
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಮೊದಲ ಸಭೆಗೆ ಬಿಜೆಪಿ ಶಾಸಕರು ಗೈರಾದರು. ಜಿಬಿಎ ರಚನೆ ಬಗ್ಗೆ ನಮಗೆ ವಿರೋಧವಿದೆ ಹಾಗಾಗಿ ನಾವು ಸಭೆಗೆ ಹಾಜರಾಗುವುದಿಲ್ಲ ಎಂದು ವಿರೋಧಿಸಿದರು.

error: Content is protected !!