Saturday, October 11, 2025

ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ: ಚಾಲಕ ಸಾವು, ಇಬ್ಬರು ಗಂಭೀರ

ಹೊಸದಿಗಂತ ವರದಿ ಮಡಿಕೇರಿ:

ಚಾಲಕನ ನಿಯಂತ್ರಣ ಕಳೆದುಕೊಂಡ‌ ಕಾರೊಂದು ಮರಕ್ಕೆ ಡಿಕ್ಕಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿ, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ತಡ ರಾತ್ರಿ ಗೋಣಿಕೊಪ್ಪ ಸಮೀಪ ನಡೆದಿದೆ.

ಮೈಸೂರಿನಿಂದ ವೀರಾಜಪೇಟೆಗೆ ಆಗಮಿಸುತ್ತಿದ್ದ ಇನ್ನೋವಾ ಕಾರು ತಿತಿಮತಿ-ಗೋಣಿಕೊಪ್ಪ ಮುಖ್ಯ ರಸ್ತೆಯ ಚೆನ್ನಂಗೊಲ್ಲಿ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿಯಾಗಿ ಬಳಿಕ ಪಲ್ಟಿಯಾಗಿದೆ.
ಈ ಸಂದರ್ಭ ಕಾರಿನಲ್ಲಿ ಪ್ರಯಾಣಿಸುತ್ತಿದ ಆರು ಮಂದಿಯ ಪೈಕಿ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡು ಮೈಸೂರಿನ ಆಸ್ಪತ್ರೆಗೆ ರವಾನಿಸಲ್ಪಟ್ಟಿದ್ದಾರೆ. ಇತರ ಮೂವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

ಗೋಣಿಕೊಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!