Thursday, October 30, 2025

ದರ್ಶನ್ ಫ್ಯಾನ್ಸ್ ವಿರುದ್ಧ ಕಾನೂನು ಸಮರ: ಪೊಲೀಸ್ ಆಯುಕ್ತರಿಗೆ ದೂರು ನೀಡಿದ ನಟಿ ರಮ್ಯಾ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ನಟ ದರ್ಶನ್ ಫ್ಯಾನ್ಸ್ ಅಶ್ಲೀಲ ಸಂದೇಶ ಕಳುಹಿಸಿದ ವಿಚಾರವಾಗಿ ಇಂದು ನಟಿ ರಮ್ಯಾ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಖುದ್ದು ದೂರು ಸಲ್ಲಿಸಿದ್ದಾರೆ. ಈ ಮೂಲಕ ನಟ ದರ್ಶನ್ ಫ್ಯಾನ್ಸ್ ವಿರುದ್ಧ ಕಾನೂನು ಸಮರ ಸಾರಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಗೆ ಹೈಕೋರ್ಟ್‌ ನೀಡಿದ್ದ ಜಾಮೀನಿನ ಬಗ್ಗೆ ಸುಪ್ರೀಂ ಕೋರ್ಟ್ ಅಸಮಧಾನವನ್ನು ಹೊರ ಹಾಕಿತ್ತು. ಈ ಬೆನ್ನಲ್ಲೇ ರಮ್ಯಾ ಅದನ್ನು ಬೆಂಬಲಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಅಲ್ಲಿಂದ ದರ್ಶನ್ ಫ್ಯಾನ್ಸ್ ರಮ್ಯಾರನ್ನು ಅಶ್ಲೀಲ ಪದಗಳಿಂದ ಟೀಕಿಸುತ್ತಿದ್ದಾರೆ.

ಈ ಸಂದರ್ಭ ದರ್ಶನ್ ಅಭಿಮಾನಿಗಳಿಂದ ಅಶ್ಲೀಲ ಮೆಸೇಜ್ ಗಳು ಬರುತ್ತವೆ ಎಂದು ನಟಿ ರಮ್ಯಾ ಆರೋಪಿಸಿದ್ದರು. ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ತೀವ್ರವಾಗಿ ಕಿಡಿ ಕಾರಿದ್ದಾರೆ. ಇದೀಗ ನಟ ದರ್ಶನ್ ಅಭಿಮಾನಿಗಳಿಂದ ಅಶ್ಲೀಲ ಸಂದೇಶ ವಿಚಾರವಾಗಿ ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾದ ನಟಿ ರಮ್ಯಾ ದೂರು ನೀಡಿದ್ದಾರೆ.

error: Content is protected !!