Sunday, December 7, 2025

ಆಸ್ಪತ್ರೆಗೆ ಭೇಟಿ ನೀಡಿ ದೇವೇಗೌಡರ ಅರೋಗ್ಯ ವಿಚಾರಿಸಿದ ಯಡಿಯೂರಪ್ಪ,ವಿಜಯೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಬೆಂಗಳೂರು ಮಣಿಪಾಲ್ ಆಸ್ಪತ್ರೆಗೆ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ , ಪುತ್ರ ಬಿ.ವೈ ವಿಜಯೇಂದ್ರ ಅವರು ಭೇಟಿ ನೀಡಿ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಅವರ ಆರೋಗ್ಯ ವಿಚಾರಿಸಿದರು.

ಇತ್ತೀಚೆಗೆ ಅನಾರೋಗ್ಯದಿಂದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಹಿನ್ನೆಲೆ ಬಿ.ಎಸ್‌ ಯಡಿಯೂರಪ್ಪ , ಪುತ್ರ ಬಿ.ವೈ ವಿಜಯೇಂದ್ರ ಭೇಟಿ ನೀಡಿ ದೇಶದ ಮತ್ತು ರೈತರ ಹಿತಕ್ಕಾಗಿ ಸದಾ ಶ್ರಮಿಸಿದ ಈ ಮಹಾನ್ ನಾಯಕರು ಶೀಘ್ರ ಚೇತರಿಸಿಕೊಂಡು ಉತ್ತಮ ಆರೋಗ್ಯದಲ್ಲಿ ಇರಲಿ ಎಂದು ಹಾರೈಸಿದರು.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಆರೋಗ್ಯ ಸ್ಥಿರವಾಗಿರುವುದಾಗಿ ಎಂದು ಜೆಡಿಎಸ್‌ ಪಕ್ಷ ಒಂದು ದಿನದ ಹಿಂದೆ ತಿಳಿಸಿದೆ.

ತಾವುಗಳು ಆತಂಕಪಡುವ ಆಗತ್ಯವಿಲ್ಲ. ಮಾಜಿ ಪ್ರಧಾನಮಂತ್ರಿಗಳು ಹಾಗೂ ಜನತಾದಳ ಪಕ್ಷದ ರಾಷ್ಟ್ರೀಯ ಅಧ್ಯಕರಾದ ದೇವೇಗೌಡರು ಚೇತರಿಸಿಕೊಂಡು ಗುಣಮುಖರಾಗಿದ್ದು, ಆರೋಗ್ಯವಾಗಿದ್ದಾರೆ. ಇನ್ನು ಕೆಲ ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ನಾಡಿನ ಜನರ ಹಾರೈಕೆ, ಪ್ರೀತಿ, ಪ್ರಾರ್ಥನೆಯೇ ಅವರಿಗೆ ಶ್ರೀರಕ್ಷೆ. ವದಂತಿಗಳಿಗೆ ಕಿವಿಗೊಡಬೇಡಿ ಎಂದು ಪಕ್ಷ ಪ್ರಕಟಣೆಯಲ್ಲಿ ಮನವಿ ಮಾಡಿದೆ.

error: Content is protected !!