ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಒಡಿಶಾದ ಜಲೇಶ್ವರ ಮೂಲದ ಯುವತಿ ಬಂಗಾಳದ ದುರ್ಗಾಪುರದಲ್ಲಿ ವೈದ್ಯಕೀಯ ಕಾಲೇಜಿನಲ್ಲಿ ಕಲಿಯುತ್ತಿದ್ದಳು.
ಇದೀಗ ಸಿಎಂ ಮಮತಾ ಬ್ಯಾನರ್ಜಿ ಈ ವಿಷಯದಲ್ಲಿ ಮಧ್ಯಪ್ರವೇಶ ಮಾಡಬೇಕೆಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಒತ್ತಾಯಿಸಿದ್ದಾರೆ.
ಒಡಿಶಾದ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರದ ಬಗ್ಗೆ ಪ್ರತಿಕ್ರಿಯಿಸಿದ ಒಡಿಶಾ ಮುಖ್ಯಮಂತ್ರಿ ಮಾಝಿ, ಅಪರಾಧಿಯ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ನೆರೆಯ ರಾಜ್ಯದ ಸಿಎಂ ಮಮತಾ ಬ್ಯಾನರ್ಜಿಯ ಮಧ್ಯಪ್ರವೇಶ ಮಾಡಬೇಕು. ಇದು ಅತ್ಯಂತ ಖಂಡನೀಯ ಮತ್ತು ನೋವಿನ ಸಂಗತಿಯಾಗಿದೆ. ಬಂಗಾಳ ಸರ್ಕಾರಕ್ಕೆ ಅಗತ್ಯವಿರುವ ಎಲ್ಲ ಸಹಾಯ ಮಾಡಲು ಸಿದ್ಧವಿದ್ದೇವೆ ಎಂದು ಅವರು ಹೇಳಿದ್ದಾರೆ.
ಎಕ್ಸ್ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಮಾಝಿ, ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಒಡಿಯಾ ವಿದ್ಯಾರ್ಥಿನಿಯ ಮೇಲೆ ನಡೆದ ದುರದೃಷ್ಟಕರ ಸಾಮೂಹಿಕ ಅತ್ಯಾಚಾರದ ಘಟನೆ ಅತ್ಯಂತ ಖಂಡನೀಯ ಮತ್ತು ನೋವಿನಿಂದ ಕೂಡಿದೆ. ಈ ಸುದ್ದಿ ಕೇಳಿ ನನಗೆ ತೀವ್ರ ಆಘಾತವಾಗಿದೆ. ಈ ಸೂಕ್ಷ್ಮ ವಿಷಯದಲ್ಲಿ, ಕಾನೂನಿನ ಪ್ರಕಾರ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ನಾನು ಬಲವಾಗಿ ಒತ್ತಾಯಿಸುತ್ತೇನೆ ಎಂದಿದ್ದಾರೆ.