March 15, 2026
Sunday, March 15, 2026
spot_img

ನನಗೂ ಮುಖ್ಯಮಂತ್ರಿಯಾಗುವ ಆಸೆಯಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನನಗೂ ಮುಖ್ಯಮಂತ್ರಿಯಾಗಬೇಕೆನ್ನುವ ಆಸೆಯಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಅವರು, ನನಗೂ ಮುಖ್ಯಮಂತ್ರಿಯಾಗಬೇಕೆನ್ನುವ ಆಸೆಯಿದೆ. ಯಾಕಾಗಬಾರದು ಎಂದು ಪ್ರಶ್ನಿಸಿದರು. ಸಚಿವ ಸಂಪುಟ ವಿಸ್ತರಣೆ, ಪುನರಚನೆ ಮುಖ್ಯಮಂತ್ರಿಗಳ ಪರಮಾಧಿಕಾರ ಹಾಗೂ ಅವರ ವಿವೇಚನೆಗ ಬಿಟ್ಟಿರುವ ವಿಚಾರ. ಸೂಕ್ತ ಸಂದರ್ಭದಲ್ಲಿ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಎಲ್ಲ ಶಾಸಕರಿಗೂ ಸಚಿವರಾಗಬೇಕು ಎಂಬ ಆಸೆ ಇರುತ್ತದೆ. ಸಚಿವ ಸಂಪುಟ ಪುನರ್‌ ರಚನೆ, ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಸೇರಿ ಇನ್ನಿತರ ವಿಷಯಗಳ ಬಗ್ಗೆ ಮುಖ್ಯಮಂತ್ರಿ, ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದು ಸ್ಪಷ್ಟಪಡಿಸಿದರು

ಮೊಸರಲ್ಲಿ ಕಲ್ಲು ಹುಡುಕುವ ಕೆಲಸ
ಮುಖ್ಯಮಂತ್ರಿಗಳು, ಸಚಿವರಿಗೆ ಔತಣಕೂಟ ಕರೆಯುವುದು ಸಾಮಾನ್ಯ. ಮುಖ್ಯಮಂತ್ರಿಗಳು ಶಾಸಕರಿಗೆ, ಸಚಿವರಿಗೆ ಸೋಮವಾರ ಊಟಕ್ಕೆ ಕರೆದಿದ್ದಾರೆ ಎನ್ನುವುದಕ್ಕೆ ಮಹತ್ವ ಕೊಡಬೇಕಾಗಿಲ್ಲ. ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ. ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ಬಿಜೆಪಿಯವರ ಮನಸ್ಥಿತಿ ಏನು ಎಂಬುದು ತಿಳಿಯುತ್ತದೆ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !