Saturday, October 25, 2025

ಹಾಲಿನ ಅಂಗಡಿಗೆ ನುಗ್ಗಿ ಓನರ್‌ಗೆ ಚಪ್ಪಲಿ ಹೊಡೆತ: ವ್ಯಕ್ತಿ ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಾಹನ ನಿಲ್ಲಿಸುವ ವಿಚಾರದಲ್ಲಿ ತೀವ್ರ ಗಲಾಟೆ ನಡೆದು ಪತ್ನಿ ಎದುರೇ ಹಾಲಿನ ಅಂಗಡಿ ಮಾಲೀಕನಿಗೆ ಮನಬಂದಂತೆ ಹಲ್ಲೆ ನಡೆಸಿದ ಆರೋಪದ ಮೇಲೆ 36 ವರ್ಷದ ರೌಡಿಶೀಟರ್ ನನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ 2ನೇ ಹಂತದಲ್ಲಿ ಈ ಘಟನೆ ನಡೆದಿದ್ದು, ಹಾಲಿನ ಪಾರ್ಲರ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಇದು ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಹಾಲಿನ ಅಂಗಡಿ ಮಾಲೀಕನಿಗೆ ರೌಡಿಯೊಬ್ಬ ಹಲ್ಲೆ ನಡೆಸುತ್ತಿರುವುದು ವಿಡಿಯೋದಲ್ಲಿದೆ. ಜನರನ್ನು ಹೆದರಿಸಲಿಲ್ಲ ಎಂದು ಆಕ್ರೋಶಗೊಂಡು ತನ್ನದೇ ಅಂಗರಕ್ಷಕರಿಗೆ ಬಡಿದಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಆರೋಪಿಯನ್ನು ಬಿಹಾರ ಮೂಲದ ತರುಣ್ ಚೌಧರಿ ಎಂದು ಗುರುತಿಸಲಾಗಿದ್ದು, ಆತ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದಾನೆ ಎನ್ನಲಾಗಿದೆ.

ಈತ ಅಕ್ಟೋಬರ್ 9 ರಂದು ರಾತ್ರಿ 10 ಗಂಟೆ ಸುಮಾರಿಗೆ ಅಂಗಡಿ ಮಾಲೀಕ ಗೋಪಾಲ್ ಹೆಚ್ ವಿ (42) ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ವರದಿಯಾಗಿದೆ.

error: Content is protected !!