Saturday, November 8, 2025

ಕರೂರು ಕಾಲ್ತುಳಿತ ದುರಂತ: ಸಿಬಿಐ ತನಿಖೆಗೆ ಸುಪ್ರೀಂ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತ ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸಿ ಸುಪ್ರೀಂ ಕೊರ್ಟ್‌ ಇಂದು ಆದೇಶಿಸಿದೆ.

ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎನ್.ವಿ ಅಂಜಾರಿಯಾ ಅವರಿದ್ದ ದ್ವಿ ಸದಸ್ಯ ಪೀಠ ಈ ಮಹತ್ವದ ಆದೇಶ ನೀಡಿದೆ.

ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್‌ ನೇತೃತ್ವದಲ್ಲಿ ನಡೆದ ರಾಜಕೀಯ ರ‍್ಯಾಲಿವೇಳೆ ಕಾಲ್ತುಳಿತ ಸಂಭವಿಸಿ 41 ಮಂದಿ ಸಾವನ್ನಪ್ಪಿದ್ದರು. ಹಲವರು ಗಾಯಗೊಂಡಿದ್ದರು. ಈ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ನಿವೃತ್ತ ನ್ಯಾಯಾಧೀಶರಾದ ಅಜಯ್ ರಸ್ತೋಗಿ ಅವರ ಅಧ್ಯಕ್ಷತೆಯಲ್ಲಿ ಮೂರು ಸದಸ್ಯರ ಸಮಿತಿಯನ್ನ ಕೂಡ ಸುಪ್ರೀಂ ಕೋರ್ಟ್‌ ರಚಿಸಿದೆ.

ಇದು ರಾಷ್ಟ್ರವನ್ನೇ ಬೆಚ್ಚಿಬೀಳಿಸಿದ ಘಟನೆ ಎಂದಿರುವ ಕೋರ್ಟ್‌, ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದು ಹೇಳಿದೆ. ಸುಪ್ರೀಂ ಕೋರ್ಟ್‌ನ ಆದೇಶದಿಂದ ಸಿಎಂ ಎಂ.ಕೆ ಸ್ಟಾಲಿನ್‌ ನೇತೃತ್ವದ ಸರ್ಕಾರಕ್ಕೆ ಹಿನ್ನಡೆಯಾಗಿದೆ. 

error: Content is protected !!