ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕೇರಳದ ಇಡುಕ್ಕಿಯ ಮುಲ್ಲಪೆರಿಯಾರ್ ಅಣೆಕಟ್ಟೆಗೆ ಇಂದು ಬಾಂಬ್ ಬೆದರಿಕೆ ಬಂದಿದೆ. ಭದ್ರತಾ ಸಿಬ್ಬಂದಿ ತೀವ್ರ ಶೋಧ ನಡೆಸಿದ್ದಾರೆ.
ಜಲಾಶಯವನ್ನು ಸ್ಫೋಟಿಸುವುದಾಗಿ ನೆರೆಯ ತ್ರಿಶೂರ್‌ನಲ್ಲಿರುವ ಜಿಲ್ಲಾ ಕಲೆಕ್ಟರ್ ಕಚೇರಿಗೆ ಇಮೇಲ್ ಕಳುಹಿಸಲಾಗಿತ್ತು ಎಂದು ಪೊಲೀಸರು ಇಂದು (ಸೋಮವಾರ) ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ಸಿಕ್ಕ ತಕ್ಷಣ ಪೊಲೀಸರು ಮತ್ತು ಬಾಂಬ್ ಸ್ಕ್ವಾಡ್ ಅಣೆಕಟ್ಟು ಸ್ಥಳಕ್ಕೆ ಧಾವಿಸಿ ಶೋಧ ನಡೆಸಿದರು. ಇಲ್ಲಿಯವರೆಗೆ ಅನುಮಾನಾಸ್ಪದ ರೀತಿಯ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ. ಹಾಗಿದ್ದರೂ ಪರಿಶೀಲನೆ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

