Wednesday, October 22, 2025

ನಟ ಡಾ.ರಾಜು ತಾಳಿಕೋಟೆ ಅಂತಿಮ ನಮನಕ್ಕೆ ಧಾರವಾಡ ಜಿಲ್ಲಾಡಳಿತ ಸಜ್ಜು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಟ, ರಂಗ ಕಲಾವಿದ, ಧಾರವಾಡ ರಂಗಾಯಣ ನಿರ್ದೇಶಕ ಡಾ. ರಾಜು ತಾಳಿಕೋಟೆ ಹೃದಯಾಘಾತದಿಂದ ನಿನ್ನೆ ವಿಧಿವಶರಾಗಿದ್ದಾರೆ.

ಇಂದು ಧಾರವಾಡದ ರಂಗಾಯಣ ಆವರಣದಲ್ಲಿ ಅಂತಿಮ ನಮನಕ್ಕೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ತಾಳಿಕೋಟೆ ಅವರ ಪಾರ್ಥಿವ ಶರೀರ ಆಗಮಿಸಲಿದೆ. ಜಿಲ್ಲಾಡಳಿತ ವತಿಯಿಂದ ರಾಜು ತಾಳಿಕೋಟೆ ಅವರಿಗೆ ಅಂತಿಮ ನಮನ ಸಲ್ಲಿಕೆ ಮಾಡಲಾಗುತ್ತದೆ.

ಹಿರಿಯ ರಂಗಕಲಾವಿದ, ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ಅವರು ಸೋಮವಾರ ಸಂಜೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಕಳೆದ ಎರಡು ದಿನಗಳಿಂದ, ಶೈನ್​ ಶೆಟ್ಟಿ ಅಭಿನಯದ ಹೊಸ ಸಿನಿಮಾದ ಚಿತ್ರೀಕರಣದಲ್ಲಿ ರಾಜು ತಾಳಿಕೋಟೆ ಅವರು ಭಾಗವಹಿಸಿದ್ದರು.

ಭಾನುವಾರ ರಾತ್ರಿ ತಾಳಿಕೋಟೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಚಿತ್ರತಂಡ ಅವರನ್ನು ಮಣಿಪಾಲ್​ ಆಸ್ಪತ್ರೆಗೆ ದಾಖಲಿಸಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸೋಮವಾರ ಸಂಜೆ ಇಹಲೋಕ ತ್ಯಜಿಸಿದರು.

error: Content is protected !!