ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿಸಿಎಂ ಡಿಕೆ ಶಿವಕುಮಾರ್ ಅವರ ಕನಸಿನ ಕೂಸು ಟನಲ್ ರಸ್ತೆ ಡಿಪಿಆರ್‌ನಲ್ಲಿ ಲೋಪದೋಷ ಕಂಡುಬಂದಿದೆ. ಹೀಗಾಗಿ ಆರಂಭದಲ್ಲೇ ಯೋಜನೆಗೆ ವಿಘ್ನ ಎದುರಾಯ್ತಾ? ಅನ್ನೋ ಪ್ರಶ್ನೆಯೂ ಎದ್ದಿದೆ.
ಹೌದು. ಟನಲ್ ಡಿಪಿಆರ್ ಅಧ್ಯಯನಕ್ಕಾಗಿ ರಾಜ್ಯ ಸರ್ಕಾರವೇ ನಗರಾಭಿವೃದ್ಧಿ ಇಲಾಖೆಯ ಐವರ ತಜ್ಞರ ಸಮಿತಿ ರಚನೆ ಮಾಡಿತ್ತು. ಈಗ ಆ ಸಮಿತಿಯೇ ಡಿಪಿಆರ್‌ನಲ್ಲಿ ಇರುವ ಲೋಪದೋಷಗಳನ್ನ ಪತ್ತೆಹಚ್ಚಿದೆ.
ತರಾತುರಿಯಲ್ಲಿ ಡಿಪಿಆರ್ ತಯಾರಿಕೆ ಮಾಡಿದ್ದಾರೆ ಎಂದು ಹೇಳಿರುವ ಸಮಿತಿ ಟನಲ್ ದೊಡ್ಡ ಯೋಜನೆ ಕೇವಲ 4 ಕಡೆ ಮಾತ್ರ ಮಣ್ಣಿನ ಪರೀಕ್ಷೆ ಇದು ಸಾಕಾಗಲ್ಲ ಎಂದು ತಿಳಿಸಿದೆ. ಹೆಬ್ಬಾಳ – ಸಿಲ್ಕ್ ಬೋರ್ಡ್‌ಗೆ ರೆಡ್‌ಲೈನ್ ಮೆಟ್ರೋ ಮಾರ್ಗ ಬರಬೇಕಾದ್ರೆ ಟನಲ್ ಏಕೆ? ಲಾಲ್ ಬಾಗ್ ಬಳಿ ಮೆಟ್ರೋ ಮಾರ್ಗ ಬರಬೇಕಾದ್ರೆ ಟನಲ್ ಯಾಕೆ ಅಂತಲೂ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ? ಹೀಗಾಗಿ ರಾಜ್ಯ ಸರ್ಕಾರದ ಮುಂದಿನ ನಡೆ ಏನು ಅನ್ನೋದನ್ನ ಕಾದುನೋಡಬೇಕಿದೆ.
ತಜ್ಞರ ವರದಿಯಲ್ಲೇನಿದೆ?
ಟನಲ್ ದೊಡ್ಡ ಯೋಜನೆ, 4 ಕಡೆ ಮಾತ್ರ ಮಣ್ಣಿನ ಪರೀಕ್ಷೆ ಸಾಕಾಗೋದಿಲ್ಲ. ಹೆಬ್ಬಾಳ-ಸಿಲ್ಕ್ ಬೋರ್ಡ್‌ಗೆ ರೆಡ್‌ಲೈನ್ ಮೆಟ್ರೋ ಇದ್ರೆ ಟನಲ್ ಮಾಡೋ ಅವಶ್ಯಕತೆ ಏನಿದೆ? ಇನ್ನು ಲಾಲ್‌ಬಾಗ್ ಬಳಿ ಮೆಟ್ರೋ ಮಾರ್ಗ ಬರಬೇಕಾದ್ರೆ ಟನಲ್ ಯಾಕೆ ಎನ್ನುವ ಪ್ರಶ್ನೆಗಳನ್ನು ಕೇಳಲಾಗಿದೆ.
ಪೀಕ್ ಅವರ್ ಟ್ರಾಫಿಕ್ ಗಣನೆಗೆ ತೆಗೆದುಕೊಂಡಿಲ್ಲ. ಕನಿಷ್ಠ 25 ವರ್ಷಕ್ಕೆ ಯೋಜನೆ ರೂಪಿಸಬೇಕು ಆದರೆ ಇಲ್ಲಿ ಬರೀ 10 ವರ್ಷದ ಯೋಜನೆ ಅಷ್ಟೇ ಇದೆ. ಬಿಎಂಟಿಸಿ, ಮೆಟ್ರೋ, ಉಪನಗರ ರೈಲುಗಳಿಗೆ ಅನಾನುಕೂಲದ ಮಾಹಿತಿ ಇಲ್ಲ
ಸುರಂಗ ರಸ್ತೆ, ಪರಿಸರ ಕಾಳಜಿ, ಸಾರಿಗೆ ವ್ಯವಸ್ಥೆ ನಿರ್ವಹಣೆ ಉಲ್ಲೇಖಿಸಿಲ್ಲ ಎಂದು ಹೇಳಿದೆ.