ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್ಎಸ್)ವನ್ನು ನಿಷೇಧ ಮಾಡುವುದು ಸರಿಯಲ್ಲ. ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪೇಜಾವರ ಶ್ರೀಗಳು, ಆರ್‌ಎಸ್ಎಸ್ ದೇಶದ ಸೇವೆಯಲ್ಲಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಾಕೃತಿಕ ವಿಪತ್ತಿನ ಸಮಯದಲ್ಲಿ ನೀಡಿದ ಸೇವೆಯನ್ನು ಯಾರೂ ಅಲ್ಲಗಳೆಸಲು ಸಾಧ್ಯವಿಲ್ಲ. ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಳ್ಳುವಾಗ ಲಾಭ-ನಷ್ಟಗಳನ್ನು ಗಮನಿಸಬೇಕು. ಸಚಿವರ ಅಭಿಪ್ರಾಯಗಳು ಸರಕಾರಕ್ಕೆ ಸಲ್ಲಿಸಿದರೂ, ಅಂತಿಮ ನಿರ್ಧಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಿಶೀಲನೆ ಮೂಲಕ ಆಗುತ್ತದೆ. ಮುಖ್ಯಮಂತ್ರಿ ಎಲ್ಲರ ಜೊತೆ ವಿಮರ್ಶಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ, ಎಲ್ಲವೂ ಸುಖಾಂತ್ಯವಾಗುತ್ತದೆ ಎಂದು ಶ್ರೀಗಳು ಹೇಳಿದರು.
ರಾಷ್ಟ್ರೀಯ ಸ್ವಯಂಸೇವಕ ಸಂಘ ತನ್ನ ಹೆಸರಿನಂತೆ ರಾಷ್ಟ್ರೀಯ ಸೇವೆಯನ್ನು ಮಾಡುತ್ತಿದೆ, ಒಬ್ಬರಿಗೆ ಸರಿ ಎಂದು ಕಂಡದ್ದು ಮತ್ತೊಬ್ಬರಿಗೆ ತಪ್ಪು ಎನಿಸಬಹುದು, ಅದನ್ನು ವಿಮರ್ಷಿಸಬೇಕು, ತಪ್ಪುಗಳಿದ್ದರೆ ಅದನ್ನು ಸರಿಪಡಿಸಬೇಕು, ಆದರೆ ನೂರು ವರ್ಷಗಳ ಸಾಧನೆ ಮತ್ತು ದೇಶಕ್ಕೆ ಆಗಿರುವ ಲಾಭವನ್ನು ಮರೆಯಲಾಗುವುದಿಲ್ಲ. ಮುಂದೆಯೂ ಆರ್‌ಎಸ್ಎಸ್ ತನ್ನ ಸೇವಾ ಕಾರ್ಯವನ್ನು ಮುಂದುವರಿಸುತ್ತದೆ ಎಂದು ಹೇಳಿದ್ದಾರೆ.