Thursday, November 20, 2025

SHOCKING | ಶಾಲಾ ಕಟ್ಟಡದಿಂದ ಹಾರಿ 17 ವರ್ಷದ ಬಾಲಕ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನ ಪೂರ್ವ ಭಾಗದ ರಿಚರ್ಡ್ಸ್ ಟೌನ್‌ನಲ್ಲಿ 17 ವರ್ಷದ ಬಾಲಕನೊಬ್ಬ ತನ್ನ ಶಾಲಾ ಕಟ್ಟಡದಿಂದ ಹಾರಿ ಸಾವನ್ನಪ್ಪಿದ್ದಾನೆ.

ಮೃತನ್ನು 12ನೇ ತರಗತಿಯ ವಿಜ್ಞಾನ ವಿದ್ಯಾರ್ಥಿ ಎಂದು ಹೇಳಲಾಗಿದೆ.  ಬೆಳಿಗ್ಗೆ 8.20ರ ಸುಮಾರಿಗೆ ಶಾಲಾ ಕಟ್ಟಡದಿಂದ ಹಾರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ಇಲ್ಲಿಯವರೆಗೆ ತಿಳಿದು ಬಂದಿಲ್ಲ. 

ವಿದ್ಯಾರ್ಥಿಯ ಸಾವನ್ನು ಅಹಜ ಸಾವು ಎಂದು ವರದಿ (ಯುಡಿಆರ್) ಮಾಡಲಾಗಿದೆ. ಈಗಾಗಲೇ ಪೊಲೀಸರು ಶಾಲೆಯ ಸಿಸಿಟಿವಿಯನ್ನು ಪರಿಶೀಲನೆ ಮಾಡಿದ್ದು, ವಿದ್ಯಾರ್ಥಿ ಸಾವಿಗೆ ಕಾರಣ ಏನು ಎಂಬುದನ್ನು ತನಿಖೆ ನಡೆಸುತ್ತಿದ್ದಾರೆ.

error: Content is protected !!