ಹೊಸದಿಗಂತ ವರದಿ, ಯಲ್ಲಾಪುರ :
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಯಲ್ಲಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಆರ್.ಎಸ್.ಎಸ್ ಒಂದು ರಾಜಕೀಯ ಸಂಘಟನೆ ಎಂದು ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿರುವ ವಿಷಯವೇ ಆ ದೃಷ್ಠಿಯಿಂದ ಸರಕಾರಿ ಶಾಲೆ, ಕಟ್ಟಡಗಳು, ಅದರ ಆವರಣಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳು ನಡೆಯದಂತೆ ನಿಷೇಧ ವಿಧಿಸುವಂತೆ ಹೇಳಿರುವದರಲ್ಲಿ ತಪ್ಪೇನಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡರು.
ಸಚಿವ ಸಂಪುಟ ಪುನಾರಚನೆ ವಿಚಾರದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪ್ರಸ್ತಾಪವೇ ಇಲ್ಲ. ನಾನು ಹೈಕಮಾಂಡ ತೀರ್ಮಾನಕ್ಕೆ ಬದ್ದರಾಗಿದ್ದೇವೆ ಎಂದರು