Wednesday, October 22, 2025

ಹೃದಯಸ್ತಂಭನ: ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹೃದಯಸ್ತಂಭನದಿಂದ ಗೋವಾ ಮಾಜಿ ಸಿಎಂ, ಕೃಷಿ ಸಚಿವ ರವಿ ನಾಯ್ಕ್ ಮಂಗಳವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಪಣಜಿಯಿಂದ 30 ಕಿ.ಮೀ ದೂರದಲ್ಲಿರುವ ನಿವಾಸದಲ್ಲಿ ರವಿ ನಾಯ್ಕ್ ಅವರು ಹೃದಯಸ್ತಂಭನಕ್ಕೊಳಗಾಗಿದ್ದರು. ಕೂಡಲೇ ಪೊಂಡಾ ಪಟ್ಟಣದ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಯಿತು. ಆದರೆ ತಡರಾತ್ರಿ 1 ಗಂಟೆಯ ಸುಮಾರಿಗೆ ರವಿ ನಾಯ್ಕ್ ನಿಧನರಾಗಿದ್ದಾರೆ. ಇಂದು ಸಂಜೆ 3 ಗಂಟೆಯ ಸುಮಾರಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. 

ರವಿ ನಾಯ್ಕ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಸಚಿವ ರವಿ ನಾಯ್ಕ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ದೀನದಲಿತರ ಸಬಲೀಕರಣದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದ ರವಿ ನಾಯ್ಕ್, ಗೋವಾದ ಅಭಿವೃದ್ಧಿ ಪಥವನ್ನು ಹೆಚ್ಚು ಶ್ರೀಮಂತಗೊಳಿಸಿದ ಅನುಭವಿ ಆಡಳಿತಗಾರ. ಅಲ್ಲದೇ ಸಾರ್ವಜನಿಕರ ಸೇವೆಗಾಗಿ ತನ್ನನ್ನು ತಾನು ಸಮರ್ಪಿಸಿಕೊಂಡಿದ್ದರು ಎಂದು ಮೋದಿ ಎಕ್ಸ್‌ನಲ್ಲಿ ಉಲ್ಲೇಖಿಸಿದ್ದಾರೆ.

error: Content is protected !!