Wednesday, October 22, 2025

ಆಯುರ್ವೇದ ಚಿಕಿತ್ಸೆಗೆ ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಆಯುರ್ವೇದ ಚಿಕಿತ್ಸೆಗೆಂದು ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ರೈಲಾ ಒಡಿಂಗಾ ಹೃದಯಸ್ತಂಭನದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ.

80 ವರ್ಷದ ರೈಲಾ ಒಡಿಂಗಾ ಆಯುರ್ವೇದ ಚಿಕಿತ್ಸೆಗಾಗಿ ಕೇರಳದ ಎರ್ನಾಕುಲಂ ಜಿಲ್ಲೆಯ ಕೂಥಾಟುಕುಳಂಗೆ ಬಂದಿದ್ದರು. ಇಂದು ಮುಂಜಾನೆ ವಾಕಿಂಗ್ ಮಾಡುತ್ತಿದ್ದ ಸಂದರ್ಭ ಹಠಾತ್ ಕುಸಿದು ಬಿದ್ದಿದ್ದಾರೆ.

ಕೂಡಲೇ ಅವರನ್ನು ಕೂಥಾಟುಕುಳಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಬೆಳಗ್ಗೆ 9:25ರ ಸುಮಾರಿಗೆ ರೈಲಾ ಒಡಿಂಗಾ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಸದ್ಯ ರೈಲಾ ಒಡಿಂಗಾ ಅವರ ಮೃತದೇಹವನ್ನು ಆಸ್ಪತ್ರೆಯಲ್ಲೇ ಇರಿಸಲಾಗಿದೆ. ಮೃತದೇಹ ಹಸ್ತಾಂತರ ಸೇರಿದಂತೆ ಮುಂದಿನ ಪ್ರಕ್ರಿಯೆಗಾಗಿ ಪ್ರಾದೇಶಿಕ ನೋಂದಣಿ ಕಚೇರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

error: Content is protected !!