ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಹೊಸದಾಗಿ ಆರು ಕಿರಿಯ ತಾಂತ್ರಿಕ ತರಬೇತಿ ಕಾಲೇಜು- GTTC ತೆರೆಯಲು ನಿರ್ಧರಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಬಳ್ಳಾರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ರಾಜ್ಯದಲ್ಲಿರುವ GTTC ಕಾಲೇಜುಗಳಲ್ಲಿ ಕೇವಲ 2 ಸಾವಿರದ 500 ವಿದ್ಯಾರ್ಥಿಗಳಿಗೆ ಪ್ರವೇಶ ಅವಕಾಶವಿತ್ತು. ಇನ್ನು ಮುಂದೆ ಹೆಚ್ಚುವರಿಯಾಗಿ ವಾರ್ಷಿಕ 6 ಸಾವಿರ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗುವುದು. ಅದಕ್ಕಾಗಿ ಇನ್ನೂ ಆರು ಹೊಸ ಕಿರಿಯ ತಾಂತ್ರಿಕ ತರಬೇತಿ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.
ಈ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಉದ್ಯೋಗ ಆಧಾರಿತ ಕೌಶಲ್ಯ ತರಬೇತಿಗೆ ಆದ್ಯತೆ ನೀಡಲಾಗುವುದು . ಇದರಿಂದಾಗಿ ಇಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಉದ್ಯೋಗ ದೊರೆಯುವುದು ಖಚಿತವಾಗಲಿದೆ ಎಂದು ತಿಳಿಸಿದರು.